ಸೋಮವಾರ, ಫೆಬ್ರವರಿ 24, 2020
19 °C

ಚೆಕ್‌ಪೋಸ್ಟ್‌ನಲ್ಲಿ ನಿಲ್ಲದ ಗೃಹಮಂತ್ರಿ ಕಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಚೆಕ್‌ಪೋಸ್ಟ್‌ ಸಿಬ್ಬಂದಿ ಕಾರು ನಿಲ್ಲಿಸುವಂತೆ ಕೈ ತೋರಿಸಿದರೂ ಗೃಹಸಚಿವ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಕಾರನ್ನು ನಿಲ್ಲಿಸಿಲ್ಲ. ಎರಡು ಕಡೆ ನಡೆದಿರುವ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಡಘಟ್ಟ ಹಾಗೂ ಹನಕೆರೆ ಬಳಿ ಚೆಕ್‌ಪೋಸ್ಟ್‌ ತೆರೆಯಲಾಗಿದೆ. ಬುಧವಾರ ಬೆಂಗಳೂರಿನಿಂದ ಮೈಸೂರಿಗೆ ಗೃಹಸಚಿವರು ಪ್ರಯಾಣಿಸುತ್ತಿದ್ದರು. ಚೆಕ್‌ಪೋಸ್ಟ್‌ ಸಿಬ್ಬಂದಿ ಎರಡೂ ಕಡೆ ಕೈತೋರಿಸಿದರೂ ಕಾರು ನಿಲ್ಲಿಸಿಲ್ಲ. ಸಚಿವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ಈ ವಿಷಯ ನಮ್ಮ ನಮ್ಮ ಗಮನಕ್ಕೆ ಬಂದಿಲ್ಲ, ಪರಿಶೀಲನೆ ನಡೆಸಲಾಗುವುದು’ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು