ಭಾರತೀನಗರ: ಗ್ರಾಮ ಪಂಚಾಯಿತಿಯು ಸ್ಥಳೀಯ ಪ್ರಜಾಪ್ರಭುತ್ವದ ಕೇಂದ್ರ ಸ್ಥಾನವಾಗಿದ್ದು, ಇದು ಸುಗಮವಾಗಿ ಕಾರ್ಯನಿರ್ವಹಿಸಬೇಕಾದರೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಕಂದಾಯವನ್ನು ಸಂದಾಯ ಮಾಡಬೇಕೆಂದು ಪಿಡಿಒ ಎನ್.ಸುಧಾ ಹೇಳಿದರು.

ಇಲ್ಲಿಯ ಗ್ರಾ.ಪಂ ಆವರಣದಲ್ಲಿ ಏರ್ಪಡಿಸಿದ್ದ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಮಾತನಾಡಿದರು. ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಪಂಚಾಯತ್ ರಾಜ್ ಮಹತ್ವದ ಬಗ್ಗೆ ಜನರದಲ್ಲಿ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷವು ಈ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಮಾತನಾಡಿ, ಕೃಷಿ ಇಲಾಖೆಯಿಂದ ಸಿಗುವ ರಸಗೊಬ್ಬರವನ್ನು ದುರುಪಯೋಗ ಪಡಿಸಿಕೊಳ್ಳದೆ ಸದುಪಯೋಗ ಪಡಿಸಿಕೊಳ್ಳಿ ಎಂದರು. ಇದೇ ಸಂದರ್ಭ ಗ್ರಾಮ ಪಂಚಾಯಿತಿಗೆ ಸ್ವಯಂ ಪ್ರೇರಿತರಾಗಿ ಕಂದಾಯ ಕಟ್ಟಿರುವ ಸಾರ್ವಜನಿಕರನ್ನು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನರೇಗಾ ಎಂಜಿನಿಯರ್ ನವೀನ್, ಲೆಕ್ಕಸಹಾಯಕ ಹರಿಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-40-1075872524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.