ಭಾರತೀನಗರ : ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದಿರುವುದನ್ನು ಖಂಡಿಸಿ ರೈತಸಂಘ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದರು.

ನೂರಾರು ಸಂಖ್ಯೆ ಕಾರ್ಯಕರ್ತರು ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿರುದ್ದ ಘೋಷಣೆ ಕೂಗಿದರು. ಆಸ್ಪತ್ರೆಯಲ್ಲಿ ರಾತ್ರಿ ಪಾಳ್ಯದಲ್ಲಿ ಯಾವುದೇ ವೈದ್ಯರು ಇಲ್ಲ. ರಸ್ತೆ ಅಪಘಾತಗಳು ಹಾಗೂ ಹಾವು ಕಡಿತ ಪ್ರಕರಣಗಳು ನಡೆಯುತ್ತಿರುತ್ತವೆ. ಗಾಯಗೊಂಡವರನ್ನು ಹಾಗೂ ಕಡಿತಕೊಳಗಾದವರನ್ನು ಆಸ್ಪತ್ರೆಗೆ ಕರೆತಂದಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರೇ ಇರುವುದಿಲ್ಲ. ಶನಿವಾರ ರಾತ್ರಿ ನಡೆದ ಅಪಘಾತದಿಂದ ಯುವಕ ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದ್ದಾರೆ. ಇದು ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗೆ ಒಂದು ಉದಾಹರಣೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸ್ಥಳಕ್ಕಾಗಮಿಸಿದ ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ರವಿಶಂಕರ್ ಪ್ರತಿಭಟನಾಕಾರರ ಮನವಿ ಆಲಿಸಿ, ಮಾತನಾಡಿ, ಸೋಮವಾರದಿಂದ ಗುರುವಾರದ ವರೆಗೆ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ರಾತ್ರಿ ಪಾಳಿಗೆ ನೇಮಕ ಮಾಡಲಾಗುವುದು. ಶುಕ್ರವಾರದಿಂದ ಭಾನುವಾರದ ವರೆಗೆ ಸ್ಥಳೀಯ ಆಡಳಿತ ವೈದ್ಯಾಧಿಕಾರಿಗಳು ವೈದ್ಯರನ್ನು ಇರುವಂತೆ ನೋಡಿಕೊಳ್ಳಲ್ಲಿದ್ದಾರೆಂದು ತಿಳಿಸಿದ ಅವರು ಧರಣಿಯನ್ನು ಕೈಬಿಡುವಂತೆ ಮನವಿ ಮಾಡಿದರು.

ಇದಕ್ಕೆ ಒಪ್ಪದ ಪ್ರತಿಭಟನಾಕಾರರು , ವೈದ್ಯರು ಬೇರೆಡೆಯಿಂದ ಇಲ್ಲಿಗೆ ಬರುವುದು ಬೇಡ, ಆಸ್ಪತ್ರೆಗೆ ಶಾಶ್ವತ ವೈದ್ಯರನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಕೆಲ ದಿನಗಳಲ್ಲಿ ಸರ್ಕಾರ ಕೌನ್ಸಲಿಂಗ್ ಮೂಲಕ ವೈದ್ಯರನ್ನು ನಿಯೋಜಿಸಲ್ಲಿದ್ದು , ಸಹಕರಿಸಬೇಕೆಂಬ ಮನವಿಯಂತೆ ಧರಣಿಯನ್ನು ಹಿಂಪಡೆದರು.

ಒಕ್ಕೂಟದ ಕರಡಕೆರೆ ಯೋಗೇಶ್, ಕೆ.ಪಿ.ದೊಡ್ಡಿ ಪುಟ್ಟಸ್ವಾಮಿ, ಕ್ಯಾತಘಟ್ಟ ಅಂದಾನಿಗೌಡ, ಅಣ್ಣೂರು ಮಹೇಂದ್ರ, ರಘುವೆಂಕಟೇಗೌಡ, ವಿಕಾಶ್, ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಡಿ.ಕೆ.ಲತಾ, ಕೆ.ಪಿ.ದೊಡ್ಡಿ ಪುಟ್ಟಸ್ವಾಮಿ, ರಾಮಣ್ಣ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-40-1782297500

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.