ಮಳವಳ್ಳಿ: ರೈತ ವಿರೋಧಿ ಯೋಜನೆಯಾಗಿರುವ ಬಿಡದಿ ಟೌನ್ ಶಿಪ್ ಅನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಸಂಚಾಲಕ ಎನ್.ಎಲ್.ಭರತ್ ರಾಜ್ ಆಗ್ರಹಿಸಿದರು.

ಸಮೃದ್ಧ ನೀರಾವರಿ ಕೃಷಿ ಭೂಮಿಯನ್ನು ನಾಶ ಮಾಡಿ ಬಿಡದಿ ಟೌನ್ ಶಿಪ್ ಯೋಜನೆ ಮಾಡುತ್ತಿರುವುದು ಸರಿಯಲ್ಲ, ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿಯಾಗಿದೆ. ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ರೈತರು ಪಕ್ಷಾತೀತವಾಗಿ ವಿರೋಧಿಸುತ್ತಿದ್ದಾರೆ. ಇದನ್ನು ಪರಿಗಣಿಸದೇ ಏ.30ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದು ರೈತರ ಸಂವಿಧಾನಬದ್ಧ ಹಕ್ಕುಗಳ ಉಲ್ಲಂಘನೆಯ ಜೊತೆಗೆ ಸರ್ಕಾರದ ಸರ್ವಾಧಿಕಾರಿ ಕ್ರಮವಾಗಿದೆ ಎಂದು ಕಿಡಿ ಕಾರಿದರು.

ಯೋಜನೆಗಾಗಿ ಸುಮಾರು 9,640 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಗೆ ಒಳಪಡಿಸಿ ರಿಯಲ್ ಎಸ್ಟೇಟ್ನವರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಆಡಳಿತ ಯಂತ್ರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಂಡು, ಹೋರಾಟ ನಡೆಸುತ್ತಿರುವ ರೈತರನ್ನು ಬೆದರಿಸುತ್ತಾ ವಿವಿಧ ರೀತಿಯಲ್ಲಿ ಕಿರುಕುಳ ನೀಡಿ, ದೌರ್ಜನ್ಯ ನಡೆಸುತ್ತಿದೆ. ಹೀಗಾಗಿ ರೈತರ ಹೋರಾಟವನ್ನು ಬಲಪಡಿಸಿ, ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಸದ್ಯದಲ್ಲಿಯೇ ಕರ್ನಾಟಕ ಪ್ರಾಂತ ರೈತ ಸಂಘ ಬೈರಮಂಗಲ ಚಲೋ ಹಮ್ಮಿಕೊಂಡಿದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆ ಜಾರಿಗೊಳಿಸಲು ಹಠ ಮಾಡುತ್ತಿರುವುದನ್ನು ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಇ.ಮಹದೇವು, ಕಾರ್ಯದರ್ಶಿ ಗುರುಸ್ವಾಮಿ, ಮುಖಂಡರಾದ ವಿಷಕಂಠ, ಚಿಕ್ಕಮೊಗಣ್ಣ, ಮರಿಲಿಂಗೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-2049318435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.