ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ಪೇಟೆ: ಕುಸಿದ ಸೇತುವೆ, ಸಿಲುಕಿದ ಕಾರು

Last Updated 15 ನವೆಂಬರ್ 2021, 2:38 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಶೀಳನೆರೆ ಹೋಬಳಿಯ ಹುಣಸನಹಳ್ಳಿ ಗ್ರಾಮದಿಂದ ಬಳ್ಳೇಕೆರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿದ್ದು, ಗ್ರಾಮದ ಸಂಪರ್ಕ ಕಡಿದುಕೊಂಡಿದೆ.

ಹುಣಸನಹಳ್ಳಿ ಕೆರೆ ಕೋಡಿಬಿದ್ದು ಅಪಾರ ಪ್ರಮಾಣದ ನೀರು ನುಗ್ಗಿದ ಪರಿಣಾಮ ಸಿಮೆಂಟ್ ಪೈಪ್ ಹಾಕಿ ನಿರ್ಮಾಣ ಮಾಡಿದ್ದ ಸೇತುವೆ ಕೊಚ್ಚಿಹೋಗಿದೆ. ಈ ಸಂದರ್ಭ ಕಾರೊಂದು ಹಳ್ಳಕ್ಕೆ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಭಸದಿಂದ ಹರಿದ ನೀರು ಅಕ್ಕಪಕ್ಕದ ಭತ್ತದ ಗದ್ದೆಗೆ ನುಗ್ಗಿ ಸುಮಾರು ಹತ್ತು ಎಕರೆಗೂ ಹೆಚ್ಚು ಭೂಮಿಯಲ್ಲಿ ಬೆಳೆದಿದ್ದ ಭತ್ತದ ಫಸಲು ನಾಶವಾಗಿದೆ.

ತಹಶಿಲ್ದಾರ್ ಎಂ.ಶಿವಮೂರ್ತಿ ಘಟನಾ ಸ್ಥಳ ಪರಿಶೀಲನೆ ನಡೆಸಿದರು.

ತಾಲ್ಲೂಕಿನಾದ್ಯಂತ ಸುರಿಯು ತ್ತಿರುವ ಮಳೆಯಿಂದಾಗಿ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೃಷಿ, ತೋಟಗಾರಿಕೆ, ಕಂದಾಯ, ಲೋಕೋಪಯೋಗಿ ಇಲಾಖೆಗಳಿಗೆ ಸೂಚಿಸಲಾಗಿದೆ. ವರದಿ ಬಂದ ಕೂಡಲೇ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಶೀಳನೆರೆ ಹೋಬಳಿಯ ರಾಜಸ್ವ ನಿರೀಕ್ಷಕ ಪುರುಷೋತ್ತಮ, ಗ್ರಾಮ ಲೆಕ್ಕಾಧಿಕಾರಿಗಳಾದ ಸುಮನ್, ಸುಧಾಕರ, ಆನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT