ಕೆ.ಆರ್.ಪೇಟೆ: ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬುಧವಾರ ಆಚರಿಸಲಾಯಿತು.

ಸಮಾಜಸೇವಕ ಕೆ.ಎಸ್ ಶಿವಪ್ಪ ಮಾತನಾಡಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಕಾವೇರಿ ನದಿಗೆ ಅಡ್ಡಲಾಗಿ ಕನ್ನಂಬಾಡಿ ಆಣೆಕಟ್ಟೆ ನಿರ್ಮಿಸಿ ಬಂಗಾರದ ಭೂಮಿಯನ್ನಾಗಿಸಿದವರು. ಜಿಲ್ಲೆಯ ಜನರು ನೆಮ್ಮದಿಯ ಜೀವನ ನಡೆಸಲು ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪ್ರಾಂತಸ್ಮರಣೀಯರು’ ಎಂದರು.

ತಹಶೀಲ್ದಾರ್ ಅಶೋಕ್ ಮಾತನಾಡಿ, ‘ಶಿಕ್ಷಣ, ಆರೋಗ್ಯ ಮೀಸಲಾತಿ ಮತ್ತು ಮೈಸೂರು ಸಂಸ್ಥಾನದ ಅಭಿವೃದ್ಧಿಯ ವಿಚಾರದಲ್ಲಿ ನಾಲ್ವಡಿ ಅವರ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗಿವೆ ಎಂದು ಸ್ಮರಿಸಿದರು.

ಮುಖಂಡರಾದ ಗಂಗಾಧರ್, ಎಚ್.ಬಿ.ಮಂಜುನಾಥ್, ಆರೋಗ್ಯ ಪರಿವೀಕ್ಷಕ ಶೀಳನೆರೆ ಸತೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿವಾಕರ್, ಬಿಸಿಎಂ ಅಧಿಕಾರಿ ವೆಂಕಟೇಶ್, ಗ್ರೇಡ್-2 ತಹಶೀಲ್ದಾರ್ ಲೋಕೇಶ್, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷೆ ಬಿ.ಎಲ್. ಚಂದ್ರಕಲಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.