ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ದೂರು: ‘ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟ ಸರ್ಕಾರ’

Last Updated 12 ಫೆಬ್ರುವರಿ 2023, 5:40 IST
ಅಕ್ಷರ ಗಾತ್ರ

ಮದ್ದೂರು: ‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರದ ಸಾಧನೆ ಶೂನ್ಯವಾಗಿದ್ದು, ಕೇವಲ ಭ್ರಷ್ಟಾಚಾರದಲ್ಲಿ ತೊಡಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗ ಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ, ಸಂಸದರಾಗಿದ್ದ ಜಿ.ಮಾದೇಗೌಡ ಅವರು ಬೆಂಬಲಿ ಸದೆ ಇದ್ದರೆ ಶಾಸಕರಾಗಿರುವ ಡಿ.ಸಿ.ತಮ್ಮಣ್ಣ ರಾಜಕೀಯ ಇತಿಹಾಸದ ಪುಟದಲ್ಲಿ ಇರುತ್ತಿರಲಿಲ್ಲ ಎಂದರು.

ಕಾಂಗ್ರೆಸ್‌ಗೆ ಜಿಲ್ಲೆಯ ಹಾಗೂ ರಾಜ್ಯದ ರೈತರ ಅಭಿವೃದ್ಧಿ ಮಾಡುವ ಶಕ್ತಿ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು. ಪ್ರತಿ ಮನೆಯ ಒಡತಿಗೆ ಪ್ರತಿ ತಿಂಗಳು ₹ 2000 ನೀಡುವ ಜತೆಗೆ ಶಿಕ್ಷಣ ಸೇರಿದಂತೆ ಮೂಲಸೌಲಭ್ಯಗಳನ್ನು ಉತ್ತಮ ಪಡಿಸಲಾಗುವುದು. ಮೇಕೆದಾ ಟು ಯೋಜನೆ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಿ ರೈತರ ಅಭಿವೃದ್ಧಿಗೆ ಮಹತ್ವ ನೀಡಲಾಗುವುದು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ಮಾತನಾಡಿದರು.

ಕೆಪಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಶಾಸಕ ಯು.ಟಿ.ಖಾದರ್, ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ, ಉಸ್ತುವಾರಿಗಳಾದ ಉಗ್ರಪ್ಪ, ಎಚ್.ಎಂ.ರೇವಣ್ಣ, ಪ್ರೊ.ಬಿ.ಕೆ.ಚಂದ್ರಶೇಖರ, ಕೆಪಿಸಿಸಿ ಸದಸ್ಯ ಎಸ್.ಗುರುಚರಣ್, ವಿಧಾನ ಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಮಲ್ಲಜಮ್ಮ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಗೌಡ, ಮೋಹನ್ ಕುಮಾರ್, ಪುರಸಭೆ ಸದಸ್ಯೆ ಪ್ರಿಯಾಂಕ ಅಪ್ಪುಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT