ಮಂಡ್ಯ: ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ತಿರುಚಿ ಅಪ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್ಸಿಗರು ಅಂಬೇಡ್ಕರ್ ಮತ್ತು ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಕರಪತ್ರ ನೀಡುವ ಮೂಲಕ ವಿನೂತನವಾಗಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಸುಭಾಷ್ ನಗರ, ಆರ್.ಪಿ. ರಸ್ತೆ, ವಿ.ವಿ.ರಸ್ತೆ, ಹೊಸಹಳ್ಳಿ ಬಡಾವಣೆ, ಮಾರುಕಟ್ಟೆ, ರೈಲ್ವೆ ಅಂಡರ್ ಪಾಸ್ ಬಳಿ ವಿವಿಧ ಘೋಷಣೆಯೊಂದಿಗೆ ಮಾಹಿತಿ ಇರುವ ಕರಪತ್ರಗಳನ್ನು ಸಾರ್ವಜನಿಕರಿಗೆ ಕೊಡುವ ಮೂಲಕ ಘೋಷಣೆ ಕೂಗಿದರು.

ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಬದಲು ಸಚಿವ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಈಶ್ವರಪ್ಪನವರ ರಾಜೀನಾಮೆ ಕೇಳಿದ್ದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಗುತ್ತಿಗೆದಾರರು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು.

ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪ್ರಚೋದಿತ ಸೋಗಲಾಡಿ ಸಂಘಟನೆಗಳು ಅಂಬೇಡ್ಕರ್ ಅವರ ಬಗ್ಗೆ ಎಲ್ಲಿಲ್ಲದ ಕಾಳಜಿ ತೋರಿಸುತ್ತಿರುವುದು ಹಾಸ್ಯಾಸ್ಪದ. ಎಸಿಪಿ, ಟಿಎಸ್ಪಿ ಹಣವನ್ನು ನುಂಗಿ ನೀರು ಕುಡಿದ ದಲಿತರಿಗೆ ಅನ್ಯಾಯ ಮಾಡಿದೆ. ವಾಲ್ಮೀಕಿ ನಿಗಮದ ಹಣವನ್ನು ಮಂಗ ಮಾಯ ಮಾಡಿದ ಕಾಂಗ್ರೆಸಿಗರಿಂದ ಹಾಗೂ ಆರ್ಎಸ್ಎಸ್ ಮತ್ತು ಬಿಜೆಪಿಗೆ ಬುದ್ಧಿ ಕಲಿಯುವ ಅವಶ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಸಿ.ಟಿ. ಮಂಜುನಾಥ್, ಗಂಗಣ್ಣ ಬೇವುಕಲ್ಲು, ಹೊಸಹಳ್ಳಿ ಶಿವು, ಶಿವಲಿಂಗಯ್ಯ, ನಂದೀಶ್, ಚಂದ್ರು, ಅಭಿ, ಯೋಗೇಶ್ ಭಾಗವಹಿಸಿದ್ದರು.

‘ಚುನಾವಣೆಯಲ್ಲಿ ಅಂಬೇಡ್ಕರ್ ಸೋಲಿಸಿದ ಕಾಂಗ್ರೆಸ್’

‘1952ರ ಸಾರ್ವತ್ರಿಕ ಚುನಾವಣೆ ಸಮಯಕ್ಕೆ ಶೆಡ್ಯೂಲ್ಡ್ ಕ್ಯಾಸ್ಟ್ ಫೆಡರೇಷನ್ ಪಕ್ಷ ಕಟ್ಟಿ ಮುಂಬೈನಿಂದ ಕಣಕ್ಕಿಳಿದಿದ್ದ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತು. ಬಂಢಾರ ಲೋಕಸಭಾ ಉಪಚುನಾವಣೆಯಲ್ಲೂ ಅಂಬೇಡ್ಕರ್ ಅವರನ್ನು ಸೋಲಿಸಲಾಯಿತು. ಈ ಮೂಲಕ ಲೋಕಸಭೆಗೆ ಬರದಂತೆ ತಡೆಯಲಾಯಿತು’ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು.

ಜನಸಂಘದ ಬೆಂಬಲ ಪಡೆದು ಪಶ್ಚಿಮ ಬಂಗಾಳದಿಂದ ರಾಜ್ಯಸಭೆಗೆ ಹೋದ ಅಂಬೇಡ್ಕರ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ. 1956ರ ಡಿಸೆಂಬರ್ 6ರಂದು ಅಂಬೇಡ್ಕರರು ಇಹಲೋಕ ತ್ಯಜಿಸಿದಾಗಲೂ ದೆಹಲಿ ಗದ್ದುಗೆಯ ಅಧಿಕಾರದಲ್ಲಿದ್ದ ನೆಹರೂ ಗೌರವದಿಂದ ನಡೆದುಕೊಳ್ಳಲಿಲ್ಲ. ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಥಳ ನೀಡಲಿಲ್ಲ.

ನವದೆಹಲಿಯಲ್ಲಿ ಅಂತಿಮ ವಿಧಿ ಸಾಧ್ಯವಿಲ್ಲ ಎಂಬುದು ಖಚಿತವಾದಾಗ ಅವರ ಕಳೇಬರವನ್ನು ಮುಂಬೈಗೆ ಕೊಂಡೊಯ್ಯಲು ವಿಮಾನ ಕೇಳಿದಾಗಲೂ ಸತಾಯಿಸಿ ಕೊನೆಗೆ ಬಾಡಿಗೆ ರೂಪದಲ್ಲಿ ನೀಡಿದ ಕಾಂಗ್ರೆಸ್ ಇಂದು ಜನರ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.