ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅತಿಥಿ ಶಿಕ್ಷಕರಿಂದ ರಕ್ತ ಸಹಿ ಚಳುವಳಿ

Published 26 ಜನವರಿ 2024, 12:58 IST
Last Updated 26 ಜನವರಿ 2024, 12:58 IST
ಅಕ್ಷರ ಗಾತ್ರ

ಮಳವಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ರಕ್ತ ಸಹಿ ಚಳುವಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ರವಾನಿಸಿದರು.

ಪಟ್ಟಣದ ಕನ್ನಡ ಭವನದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಮಹೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.
ನಂತರ ಮಾತನಾಡಿ, ‘ಅತಿಥಿ ಶಿಕ್ಷಕರೇ ಎಲ್ಲ ಜವಾಬ್ದಾರಿ ನಿರ್ವಹಿಸಿ ಉತ್ತಮ ಫಲಿತಾಂಶ ನೀಡಿರುವ ನೂರಾರು ಶಾಲೆಗಳಿವೆ, ನಮ್ಮ ದುಡಿಮೆಗೆ ಬೆಲೆ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಿಲ್ಲ. ಫೆಬ್ರುವರಿ 16ರ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡಬೇಕು’ ಎಂದು ಮನವಿ ಮಾಡಿದರು.

ಪದಾಧಿಕಾರಿಗಳಾದ ಚುಂಚಣ್ಣ, ಕೆಂಪರಾಜು, ಪುಟ್ಟರಾಜು, ಶಿವಮ್ಮ, ಸುಮಿತ್ರಾ, ವಿಷಕಂಠ ಮೂರ್ತಿ, ರೇಖಾ, ರಾಧಾ, ರಮ್ಯಾ, ಹನುಮಂತಪ್ಪ, ಹನುಮಯ್ಯ, ಬಿಲ್ಲಯ್ಯ ಸ್ವಾಮಿ, ಮಹದೇವಸ್ವಾಮಿ, ಮಹದೇವು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT