ಶ್ರೀರಂಗಪಟ್ಟಣ: ಸದಾ ಪ್ರವಾಸಿಗರು ಇರುವ ತಾಲ್ಲೂಕಿನ ಕೆಆರ್ಎಸ್ನ ಬೃಂದಾವನದ ಆವರಣದಲ್ಲಿ ಬಾಂಬ್ ಸ್ಫೋಟದ ಸದ್ದು ಕೇಳಿ ಸ್ಥಳದಲ್ಲಿದ್ದವರು ಬೆಚ್ಚಿದರು. ನೀರಿನಲ್ಲಿ ಮುಳುಗಿದ್ದವರನ್ನು ದಡಕ್ಕೆ ತರಲಾಯಿತು. ಬೆಂಕಿ ಬಿದ್ದಾಗ ರಕ್ಷಣೆ, ಕಟ್ಟಡ ಕುಸಿತದಿಂದ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಲಾಯಿತು!

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅಣೆಕಟ್ಟೆ ಇತರ ಆಸ್ತಿ ಪಾಸ್ತಿಗಳ ಸಂರಕ್ಷಣೆ ಮಾಡುವ ಕುರಿತು ತಾಲ್ಲೂಕಿನ ಕೆಆರ್ಎಸ್ನಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಭಾನುವಾರ ನಡೆದ ‘ಆಪರೇಷನ್ ಅಭ್ಯಾಸ್’ ಅಣಕು ಪ್ರದರ್ಶನದ ದೃಶ್ಯಗಳಿವು.

ಶಬ್ದ ಕೇಳಿ ಬಂದ ತಕ್ಷಣ ಸೈರನ್ ಮೊಳಗಿತು. ಕಂಟ್ರೋಲ್ ರೂಂಗೆ ಮಾಹಿತಿ ರವಾನಿಸಲಾಯಿತು. ಶ್ವಾನ ದಳದೊಂದಿಗೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಉದ್ಯಾನವನದ ವಿವಿಧೆಡೆ ಪರಿಶೀಲನೆ ಆರಂಭಿಸಿತು. ಆಯ್ದ ಪ್ರವಾಸಿಗರನ್ನು ತಪಾಸಣೆಗೆ ಒಳಪಡಿಸಲಾಯಿತು. ಅಗ್ನಿಶಾಮಕ ದಳ, ಪೊಲೀಸ್, ಎನ್ಸಿಸಿ ತಂಡದ ಸದಸ್ಯರು ಗಾಯಾಳುಗಳ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ವೈದ್ಯಕೀಯ ತಂಡ ಸ್ಥಳದಲ್ಲೇ ತುರ್ತು ಚಿಕಿತ್ಸೆ ಆರಂಭಿಸಿತು.

ಎರಡು ತಾಸುಗಳಿಗೂ ಹೆಚ್ಚು ಕಾಲ ಅಣಕು ಪ್ರದರ್ಶನ ನಡೆಯಿತು. ನೀರಿನಲ್ಲಿ ಬಿದ್ದವರ ರಕ್ಷಣೆಗೆ ಧಾವಿಸುವ ಸನ್ನಿವೇಶವನ್ನು ಜಲಾಶಯದ ತಗ್ಗಿನಲ್ಲಿರುವ ಕೊಳದಲ್ಲಿ ಸೃಷ್ಟಿಸಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ದೋಣಿಯಲ್ಲಿ ಧಾವಿಸಿ ನೀರಿನಲ್ಲಿ ಮುಳುಗಿದ್ದವರನ್ನು ದಡಕ್ಕೆ ತಂದರು. ಅಸ್ವಸ್ಥರಾಗಿದ್ದವರಿಗೆ ವೈದ್ಯಕೀಯ ಸಿಬ್ಬಂದಿ ತಾತ್ಕಾಲಿಕ ಶಿಬಿರಗಳಲ್ಲಿ ತುರ್ತು ಚಿಕಿತ್ಸೆ ನೀಡಿದರು.

ಕಟ್ಟಡ ಕುಸಿತ ಅಥವಾ ಬೆಂಕಿ ಅವಘಡದಿಂದ ಉಂಟಾಗುವ ಅಪಾಯದ ಸನ್ನಿವೇಶವನ್ನು ಬೃಂದಾವನ ಪಕ್ಕದ ಹೋಟೆಲ್ ಮಯೂರ ಕಾವೇರಿ ಕಟ್ಟಡದಲ್ಲಿ ಸೃಷ್ಟಿಸಲಾಗಿತ್ತು. ಅವಘಡ ನಡೆದ ಸ್ಥಳದಿಂದ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ಠಾಣೆಗಳಿಗೆ ಮಾಹಿತಿ ರವಾನಿಸುವುದು ಮತ್ತು ಕಟ್ಟಡದ ಒಳಗೆ ಸಿಲುಕಿದವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸುವ ಬಗೆ ಗಮನ ಸೆಳೆಯಿತು. ರಕ್ಷಣಾ ತಂಡ ಶರವೇಗದಲ್ಲಿ ಕಟ್ಟಡ ಏರುವುದು, ಪರಿಕರಗಳ ಬಳಕೆ, ಬೆಂಕಿ ನಂದಿಸುವುದು, ಸಂತ್ರಸ್ತರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ವಿಧಾನವನ್ನು ನೆರೆದಿದ್ದವರು ಕುತೂಹಲದಿಂದ ವೀಕ್ಷಿಸಿದರು. ರಕ್ಷಣಾ ಸಿಬ್ಬಂದಿಯ ಚಾಕಚಕ್ಯತೆಗೆ ಸ್ಥಳದಲ್ಲಿದ್ದವರು ಬೆರಗಾದರು.

ನೀರು, ಬೆಂಕಿ ಮತ್ತು ಕಟ್ಟಡ ಕುಸಿತದಂತಹ ಅವಘಡಗಳಿಂದ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡುವ ಶಿಬಿರಗಳನ್ನು ಸೃಷ್ಟಿಸಲಾಗಿತ್ತು. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾದರು. ಗಂಭೀರ ಸ್ಥಿತಿಯಲ್ಲಿರುವವರು ಮತ್ತು ಸಣ್ಣ ಪ್ರಮಾಣದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಶಿಬಿರಗಳಿದ್ದವು.

ವಾರ್ನಿಂಗ್ ಟೀಂ, ಇವ್ಯಾಕುಯೇಷನ್ ಟೀಂ, ಕಂಟ್ರೋಲ್ ರೂಂ, ಪೊಲೀಸ್, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ಎನ್ಸಿಸಿ, ಹೋಂ ಗಾರ್ಡ್ಗಳ ತಂಡಗಳು ಯೋಜಿತ ರೀತಿಯಲ್ಲಿ ಕಾರ್ಯನಿರ್ವಹಿಸಿದವು.

ಜಿಲ್ಲಾಧಿಕಾರಿ ಕುಮಾರ ನೇತೃತ್ವ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ತಿಮ್ಮಯ್ಯ, ಗಂಗಾಧರ್, ಅಗ್ನಿಶಾಮಕ ಅಧಿಕಾರಿ ರಾಘವೇಂದ್ರ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ ಅಣಕು ಪ್ರದರ್ಶನ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಿದ್ದರು.

ಯೋಜಿತ ರೀತಿಯಲ್ಲಿ ಕಾರ್ಯನಿರ್ವಹಿಸಿದ ತಂಡಗಳು ಅಣಕು ಪ್ರದರ್ಶನವನ್ನು ಕುತೂಹಲದಿಂದ ವೀಕ್ಷಿಸಿದ ಜನ ಎರಡು ತಾಸುಗಳಿಗೂ ಹೆಚ್ಚು ಕಾಲ ನಡೆದ ಅಣಕು ಪ್ರದರ್ಶನ

‘ಜನರ ಪ್ರಾಣ ಮತ್ತು ಆಸ್ತಿ ಪಾಸ್ತಿ ರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಅಣಕು ಪ್ರದರ್ಶನ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ
ಕುಮಾರ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.