ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಜಿ.ಎಸ್. ಬೊಮ್ಮೇಗೌಡ ಸಹಕಾರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಪಿ.ಲೋಕೇಶ್ ಚಂದಗಾಲು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, 2026ನೇ ಸಾಲಿನ ಜಿ.ಎಸ್.ಬೊಮ್ಮೇಗೌಡ ಸಹಕಾರ ಪ್ರಶಸ್ತಿಗೆ ಮೈಸೂರು ಜಿಲ್ಲೆಯ ಸಹಕಾರಿ ಮಹಿಳೆ ಕೆ.ಲಲಿತಾ ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ಫಲಕದೊಂದಿಗೆ ₹25 ಸಾವಿರ ನಗದು ನೀಡಿ ಗೌರವಿಸಲಾಗುವುದು ಎಂದರು.

ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮೈಸೂರು ವಿ.ವಿ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಕೆ.ಟಿ. ವೀರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡುವರು. ಮಾಜಿ ಶಾಸಕ ಹಾಗೂ ದತ್ತಿದಾನಿ ಜಿ.ಬಿ. ಶಿವಕುಮಾರ್ ಉಪಸ್ಥಿತರಿರುವರು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್ಗೌಡ, ಮಾಜಿ ಶಾಸಕ ಜಿ.ಬಿ.ಶಿವಮಾರ್, ಜೆ.ರಾಜಶೇಖರ, ಸುರೇಶ್, ಉದಯ್ ಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.