ಶ್ರೀರಂಗಪಟ್ಟಣ: ಬುದ್ಧ ಪೂರ್ಣಿಮೆ ನಿಮಿತ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ಇತರೆಡೆ ಭಾನುವಾರ ಬುದ್ಧ ದಮ್ಮ ಜಾಗೃತಿ ಕಾರ್ಯಕ್ರಮ ನಡೆಯಿತು.

ತಾಲ್ಲೂಕಿನ ಕೆ.ಶೆಟ್ಟಹಳ್ಳಿಯ ವಿನಯ ವನ ಬುದ್ಧ ವಿಹಾರ, ಬುದ್ಧ ಟ್ರಸ್ಟ್ ಹಾಗೂ ಭಾರತೀಯ ಬೌದ್ಧ ಮಹಾಸಭಾ ವತಿಯಿಂದ, ಬುದ್ಧ ಪೂರ್ಣಿಮೆ ಮುನ್ನಾ ದಿನ ಬುದ್ಧನ ಅನುಯಾಯಿಗಳು ಜಾಗೃತಿ ನಡೆಸಿದರು. ಸಾರ್ವಜನಿಕರು, ಆಸ್ಪತ್ರೆಯ ಸಿಬ್ಬಂದಿ, ರೋಗಿಗಳು ಮತ್ತು ಅವರ ಬಂಧುಗಳಿಗೆ ಬುದ್ಧನ ಸಂದೇಶಗಳನ್ನು ತಿಳಿಸಿದರು.

ಗೌತಮ ಬುದ್ಧ ಸಾರಿದ ಸರಳತೆಯ ತತ್ವ ಎಲ್ಲರ ಮನ, ಮನೆಗಳಿಗೆ ತಲುಪಬೇಕು. ಜಾತಿ, ಧರ್ಮ, ವರ್ಗ, ವರ್ಣ ರಹಿತ ಸಮಾಜ ನಿರ್ಮಾಣ ಆಗಬೇಕಾದರೆ ಬುದ್ದನ ಪಂಚಶೀಲ ತತ್ವಗಳನ್ನು ಅನುಸರಿಸಬೇಕು. ಈ ದಿಸೆಯಲ್ಲಿ ಮೂರು ದಿನಗಳ ಕಾಲ ವಿವಿಧೆಡೆ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬುದ್ಧ ಟ್ರಸ್ಟ್ ಅಧ್ಯಕ್ಷ ಮೋಹನದಾಸ್ ತಿಳಿಸಿದರು.

ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ನಡೆಯಿತು. ಪ್ರೇರಣಾ ಅಂಗವಿಕಲ ಶಾಲೆಯ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಸೋಮವಾರ ವಿನಯ ವನ ಬುದ್ಧ ವಿಹಾರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದರು.

ಟ್ರಸ್ಟ್ ನ ಉಪಾಧ್ಯಕ್ಷ ರಮೇಶ್, ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷ ಬೆಳಗೊಳ ಬಸವಯ್ಯ, ಬುದ್ಧಿಸ್ಟ್ ಒಕ್ಕೂಟದ ಅಧ್ಯಕ್ಷ ವಿ. ಸುರೇಶ್, ಸೆಸ್ಕ್ ಜೂನಿಯರ್ ಎಂಜಿನಿಯರ್ ಸುರೇಂದ್ರ ಮೋಹನ್, ಕೆ.ಟಿ. ರಂಗಯ್ಯ, ಮದನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.