ಮಂಗಳವಾರ, ಮೇ 11, 2021
20 °C

ಬಸ್‌ಗೆ ತಡೆ; ವ್ಯಕ್ತಿ ಪೊಲೀಸ್‌ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಅನ್ನು ಅಡ್ಡಗಟ್ಟಿದ ವ್ಯಕ್ತಿಯೊಬ್ಬ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ರವಿ ಎಂಬಾತ ಬಸ್‌ ಅನ್ನು ಅಡ್ಡ ಹಾಕಿ, ‘ಮುಷ್ಕರ ಇದ್ದರೂ ನೀನು ಯಾಕೆ ಬಸ್‌ ಚಾಲನೆ ಮಾಡುತ್ತಿದ್ದೀಯಾ’ ಎಂದು ಚಾಲಕನ್ನು ಪ್ರಶ್ನಿಸಿದ್ದಾನೆ.

ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ರವಿಯನ್ನು ತರಾಟೆಗೆ ತೆಗೆದುಕೊಂಡರು.

ಮದ್ದೂರು ಪೊಲೀಸರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರವಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.