ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಳವಳ್ಳಿ | ಬಸ್ ಡಿಕ್ಕಿ; ಕೆಪಿಟಿಸಿಎಲ್ ನೌಕರ ಸಾವು

Published 25 ಜೂನ್ 2024, 15:31 IST
Last Updated 25 ಜೂನ್ 2024, 15:31 IST
ಅಕ್ಷರ ಗಾತ್ರ

ಮಳವಳ್ಳಿ: ತಾಲ್ಲೂಕಿನ ಕಣಿಗಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಮಂಚನಹಳ್ಳಿ ಗ್ರಾಮದ ಪುಟ್ಟನಂಜೇಗೌಡ ಅವರ ಪುತ್ರ ಕೆಪಿಟಿಸಿಎಲ್ (ಟಿಎಲ್ಐ) ಎಂಜಿನಿಯರ್ ಪಿ.ರವಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಶಿವನಸಮುದ್ರ ಬಳಿಯ ಕೆಪಿಟಿಸಿಎಲ್‌ನ ವಿಭಾಗದಲ್ಲಿ ಕಿರಿಯ ಎಂಜಿನಿಯರ್ ಆಗಿದ್ದ ಪಿ.ರವಿ ತಮ್ಮ ಬೈಕ್‌ನಲ್ಲಿ ಮಳವಳ್ಳಿ ಪಟ್ಟಣಕ್ಕೆ ಹೋಗಿ ಮಂಚನಹಳ್ಳಿಗೆ ತೆರಳುತ್ತಿದ್ದ ವೇಳೆ ಮಳೆ‌ ಬರುತ್ತಿದ್ದರಿಂದ ರಾಷ್ಟ್ರೀಯ ಹೆದ್ದಾರಿ-209ರ ಕಣಿಗಲ್ ಗೇಟ್ ಬಳಿ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮರವೊಂದರ ಕೆಳಗೆ ಹಣ್ಣು ಖರೀದಿಗೆ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಮಳವಳ್ಳಿಯಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಪಿ.ರವಿ ಅವರಿಗೆ ಡಿಕ್ಕಿ ಹೊಡೆದಿದೆ. 

ಅದೃಷ್ಟವಶಾತ್ ಹಣ್ಣಿನ ವ್ಯಾಪಾರಿ ಬೇರೆಯೆಡೆ ತೆರಳಿದ್ದರಿಂದ ಅವರ ಪ್ರಾಣ ಉಳಿಯಿತು. ಘಟನೆಯಲ್ಲಿ ಹಣ್ಣಿನ ಅಂಗಡಿ ಸಂಪೂರ್ಣ ಜಖಂ ಆಗಿದೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪಿಎಸ್‌ಐ ಶ್ರವಣ ದಾಸರಡ್ಡಿ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT