ಮದ್ದೂರು: ‘ಅಧಿಕಾರ ದಾಹದಿಂದ ನಾವು ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂಬ ಸಂಕಲ್ಪದೊಂದಿಗೆ ಈ ಹೋರಾಟ ಹಮ್ಮಿಕೊಂಡಿದ್ದೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ನಾಲ್ಕನೇ ದಿನವಾದ ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿ, ‘ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ’ ಎಂದು ಕುಟುಕಿದರು.