ಮಂಡ್ಯ: ‘ಮಿಮ್ಸ್ನಲ್ಲಿ ನೂತನ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲಾಗುತ್ತಿದೆ. ಕ್ಯಾನ್ಸರ್ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದೆ. ಬಂಕರ್ ಇನ್ಸ್ಟಾಲ್ ಮಾಡಲು 3-4 ತಿಂಗಳ ಕಾಲಾವಕಾಶ ಅಗತ್ಯವಿದೆ. ಶೀಘ್ರವಾಗಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಿ ಸಾರ್ವಜನಿಕರಿಗೆ ಸೇವೆ ಒದಗಿಸಿ’ ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.

ಇಲ್ಲಿಯ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಮಿಮ್ಸ್) ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಆಗಸ್ಟ್ ತಿಂಗಳಲ್ಲಿ 720 ಯುನಿಟ್ ಸೇರಿದಂತೆ ಪ್ರಸಕ್ತ ವರ್ಷ ಇದುವರೆಗೆ ಒಟ್ಟು 11 ಸಾವಿರ ಯುನಿಟ್ ರಕ್ತ ಸಂಗ್ರಹಿಸಲಾಗಿದೆ. ಪ್ರತಿ ನಿತ್ಯ ಮಿಮ್ಸ್ ನಲ್ಲಿ 500 ಯುನಿಟ್ ರಕ್ತ ದಾಸ್ತಾನು ಇರುತ್ತದೆ. ಸದ್ಯ ಮಿಮ್ಸ್ನಲ್ಲಿ ಬ್ಲಡ್ ಬ್ಯಾಂಕ್ ನಲ್ಲಿ ಯಾವುದೇ ಕೊರತೆ ಇಲ್ಲ. ರಕ್ತ ಸಂಗ್ರಹಣೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ವಿವಿಧ ರಕ್ತದಾನ ಶಿಬಿರ ಆಯೋಜಿಸಿ ಉತ್ತಮ ಕಾರ್ಯ ಮಾಡುತ್ತಿದೆ’ ಎಂದರು.

ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಣೆ ಮಾಡಿ. ಪದವಿ ಕಾಲೇಜುಗಳಲ್ಲೂ ರಕ್ತದಾನದ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿ ರಕ್ತದಾನ ಶಿಬಿರ ಆಯೋಜಿಸಿ ಎಂದು ಸೂಚಿಸಿದರು.

ನೈರ್ಮಲ್ಯ ಕಾಪಾಡಿ:

ಆರೋಗ್ಯ ಧಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ. ಮಿಮ್ಸ್ ಆಸ್ಪತ್ರೆಯ ಪಡಸಾಲೆ ಮತ್ತು ಪಾದಚಾರಿ ಮಾರ್ಗದಲ್ಲಿ ಯಾರನ್ನು ತಂಗಲು ಬಿಡಬೇಡಿ. ಬಡವರಿಗೆ ಅನುಕೂಲವಾಗಲೆಂದು ‘ಆರೋಗ್ಯ ಧಾಮ’ ನಿರ್ಮಿಸಲಾಗಿದೆ ಎಂದು ಹೇಳಿದರು.

ಇಲ್ಲಿಯವರೆಗೂ ಆರೋಗ್ಯಧಾಮ ₹1.69 ಲಕ್ಷ ಆದಾಯ ಗಳಿಸಿದೆ. ಸದರಿ ಮೊತ್ತದಲ್ಲಿ ಆರೋಗ್ಯ ಧಾಮದ ನಿರ್ವಹಣೆ ಮಾಡಲಾಗುತ್ತಿದೆ. ಆರೋಗ್ಯ ಧಾಮದಲ್ಲಿ ಕಡ್ಡಾಯವಾಗಿ ಕಸದ ಬುಟ್ಟಿ ಇಡಬೇಕು, ಕೈ ತೊಳೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿ. ಶುದ್ಧ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಿ ಹಾಗೂ ಕಾಲ ಕಾಲಕ್ಕೆ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಿ. ಕ್ಯಾಂಟೀನ್ ನಿರ್ವಹಣೆ ಮಾಡಲು ಟೆಂಡರ್ ಪ್ರಕ್ರಿಯೆ ಆರಂಭಿಸಿ. ಆಸ್ಪತ್ರೆಯ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡಿ ಎಂದು ಸೂಚಿಸಿದರು.

ಸಭೆಯಲ್ಲಿ ಮುಡಾ ಆಯುಕ್ತ ಕೃಷ್ಣ ಕುಮಾರ್, ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ, ವೈದ್ಯಕೀಯ ಅಧೀಕ್ಷಕ ಶಿವಕುಮಾರ್, ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ರಕ್ತನಿಧಿ ಕೇಂದ್ರ ಮುಖ್ಯಸ್ಥ ಮುರಳೀಧರ ಭಟ್ ಇದ್ದರು.

‘ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಚಿಂತನೆ’ ನಂದ ಸರ್ಕಲ್ನಲ್ಲಿರುವ ಇಂದಿರಾ ಕ್ಯಾಂಟೀನ್ಗೆ ನಿರೀಕ್ಷಿತ ಸಂಖ್ಯೆಯಲ್ಲಿ ಜನ ಆಹಾರ ಸೇವಿಸಲು ಆಗಮಿಸುತ್ತಿಲ್ಲ. ಸದರಿ ಇಂದಿರಾ ಕ್ಯಾಂಟೀನ್ ಅನ್ನು ಮಿಮ್ಸ್ ಆಸ್ಪತ್ರೆ ಆವರಣಕ್ಕೆ ಸ್ಥಳಾಂತರಿಸಿದರೆ ಚಿಕಿತ್ಸೆಗೆ ಬಂದ ಸಾರ್ವಜನಿಕರಿಗೆ ಉಪಯುಕ್ತವಾಗುತ್ತದೆ. ಇಂದಿರಾ ಕ್ಯಾಂಟೀನ್ ಅನ್ನು ಮಿಮ್ಸ್ ತರುಲು ಅವಕಾಶವಿದ್ದಲ್ಲಿ ಮಿಮ್ಸ್ ಆವರಣಕ್ಕೆ ಸ್ಥಳಾಂತರಿಸೋಣ. ಈ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.

‘ಎಂಆರ್ಐ ಸ್ಕ್ಯಾನಿಂಗ್ಗೆ ವಿಳಂಬ ಸಲ್ಲದು’ ಎಂ.ಆರ್.ಐ ಸ್ಕ್ಯಾನಿಂಗ್ ಮಾಡಲು ಹೆಚ್ಚಿನ ದಿನ ತೆಗೆದುಕೊಳ್ಳಬೇಡಿ. ಮೂರರಿಂದ ನಾಲ್ಕು ದಿನದೊಳಗಾಗಿ ಎಂ.ಆರ್.ಐ ಸ್ಕ್ಯಾನಿಂಗ್ ಮಾಡಿ ತುರ್ತು ಅಗತ್ಯವಿರುವ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಸ್ಕ್ಯಾನಿಂಗ್ ಮಾಡಿ. ವೈದ್ಯರು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡಬೇಕು. ವೈದ್ಯರ ಹಾಜರಾತಿ ತೆಗೆದುಕೊಂಡು ಮೇಲ್ವಿಚಾರಣೆ ಮಾಡಿ ಎಂದು ಜಿಲ್ಲಾಧಿಕಾರಿ ಮಿಮ್ಸ್ ನಿರ್ದೇಶಕರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.