ನಾಗಮಂಗಲ: ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದ ರಾಮೇಗೌಡ(45) ಮೃತರು. ತಾಲ್ಲೂಕಿನ ಬೆಂಗಮಂಗಲ ಮತ್ತು ಅಂಚೆಭೂವನಹಳ್ಳಿ ಸಮೀಪ ಭಾನುವಾರ ಸಂಜೆ ಮುಳಕಟ್ಟೆ ಗ್ರಾಮದಲ್ಲಿ ಅಡುಗೆ ಕೆಲಸಕ್ಕೆ ಬಂದಿದ್ದ ರಾಮೇಗೌಡ ಅವರು ಮತ್ತೊಬ್ಬ ವ್ಯಕ್ತಿಯ ಜೊತೆ ಹೀರೋ ಸ್ಪೆಂಡರ್ ಬೈಕ್ನಲ್ಲಿ ಬೆಳ್ಳೂರು ಕ್ರಾಸ್ ಕಡೆಗೆ ಬರುತ್ತಿದ್ದಾಗ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಮೇಗೌಡ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಮತ್ತೊಬ್ಬ ಯುವಕನಿಗೆ ಗಾಯವಾಗಿದ್ದು, ಅವರನ್ನು ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.