ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಪಲ್ಟಿ: ಐವರು ವಿದ್ಯಾರ್ಥಿಗಳಿಗೆ ಗಾಯ

Published 14 ಮಾರ್ಚ್ 2024, 15:38 IST
Last Updated 14 ಮಾರ್ಚ್ 2024, 15:38 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಕಾರು ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಗಣಂಗೂರು ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.

ಮೈಸೂರು ಕಡೆಯಿಂದ ಮಂಡ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಘಟನೆಯಲ್ಲಿ ಮಂಡ್ಯ ತಾಲ್ಲೂಕು ಎಚ್‌. ಮಲ್ಲಿಗೆರೆ ಗ್ರಾಮದ ಶಿವಣ್ಣ ಅವರ ಮಗ ಸಿದ್ದಪ್ಪಾಜಿ (20), ಅಂದಾನಿಗೌಡ ಅವರ ಮಗ ಸುನಿಲ್‌ (20), ನಿಂಗಪ್ಪ ಅವರ ಮಗ ನವೀನಕುಮಾರ್‌ (21), ದಿವಂಗತ ಚಂದ್ರು ಅವರ ಮಗ ಸಾಗರ್‌ (21) ಮತ್ತು ಗುರುಪ್ರಸಾದ್‌ ಅವರ ಮಗ ಚಂದ್ರಶೇಖರ್‌ (21) ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮಂಡ್ಯದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಮಂಡ್ಯ ನಗರದ ಬಾಲಕರ ಮಹಾ ವಿದ್ಯಾಲಯದ ಪದವಿ ವಿದ್ಯಾರ್ಥಿಗಳಾಗಿದ್ದು, ಮೈಸೂರಿಗೆ ಬಂದು ವಾಪಸ್‌ ಮಂಡ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT