ಬುಧವಾರ, ಜೂನ್ 29, 2022
26 °C

ನೀತಿ ಸಂಹಿತೆ ಉಲ್ಲಂಘನೆ: ಸಚಿವ ಅಶ್ವತ್ಥ ನಾರಾಯಣ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಶಾಲಾ–ಕಾಲೇಜುಗಳಲ್ಲಿ ಪ್ರಚಾರ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್‌ ಜಿಲ್ಲಾ ಚುನಾವಣಾಧಿಕಾರಿಗೆ ಮಂಗಳವಾರ ದೂರು ನೀಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮೇ 16ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಹಿಳಾ ಕಾಲೇಜು, ಪಿಇಎಸ್‌ ಎಂಜಿನಿಯರಿಂಗ್‌ ಕಾಲೇಜು, ಮಾಂಡವ್ಯ ಶಾಲೆಯಲ್ಲಿ ಸಭೆ ನಡೆಸಿ ಪ್ರಚಾರ ನಡೆಸಿದ್ದಾರೆ. ಸಭೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಸಚಿವ ಅಶ್ವತ್ಥ ನಾರಾಯಣ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು