ಕೆಆರ್‌ಎಸ್ ಬೃಂದಾವನ ಉದ್ಯಾನದಲ್ಲಿ ಭಾನುವಾರ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ವಿವಿಧ ಮಠಾಧೀಶರು ಕಾವೇರಿ ಮಾತೆಗೆ ಪುಷ್ಪ ನಮನ ಸಲ್ಲಿಸಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಜಿಲ್ಲಾಧಿಕಾರಿ ಕುಮಾರ ಪಾಲ್ಗೊಂಡಿದ್ದರು
ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ. ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ
- ಜ್ಯೋತಿ ವಿಕಾಸ್ ಅನಿವಾಸಿ ಭಾರತೀಯರು ಫೀನಿಕ್ಸ್
ಜ್ಯೋತಿ ವಿಕಾಸ ಅವರು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ₹5 ಲಕ್ಷ ಕಳುಹಿಸಿ ಕೊಟ್ಟಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ
– ದಿನೇಶ್ ಗೂಳಿಗೌಡ ವಿಧಾನ ಪರಿಷತ್ ಸದಸ್ಯ
‘ಕಾವೇರಿ ಆರತಿ’ಗೆ ₹5 ಲಕ್ಷ ದೇಣಿಗೆ
‘ಐತಿಹಾಸಿಕ ‘ಕಾವೇರಿ ಆರತಿ’ ಕಾರ್ಯಕ್ರಮವು ರಾಜ್ಯ ದೇಶದಲ್ಲಿ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ’ ಎಂದು ಅಮೆರಿಕದ ಫೀನಿಕ್ಸ್‌ನಲ್ಲಿ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಈ ದಂಪತಿ ₹5 ಲಕ್ಷವನ್ನು ದೇಣಿಗೆಯಾಗಿ ನೀಡಿದ್ದಾರೆ. ‘ತಾನು ಬೆಂಗಳೂರಿನವರಾಗಿದ್ದು ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು ಎಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಕಾವೇರಿ ಮಾತೆಗೆ ವಂದಿಸಿ ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ’ ಎಂದು ತಿಳಿಸಿದ್ದಾರೆ.