ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕೆಆರ್ಎಸ್ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಜಲಾಶಯದ ಪ್ಲಸ್ 80 ಅಡಿ ಮಟ್ಟದ ಗೇಟ್ಗಳ ಮೂಲಕ ಬುಧವಾರ ಮಧ್ಯಾಹ್ನದಿಂದ 30 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ರಂಗನತಿಟ್ಟು ಪಕ್ಷಿಧಾಮದಲ್ಲಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಮಂಗಳವಾರ ಸಂಜೆಯಿಂದ ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರಿಗೆ ಪಕ್ಷಿ ವೀಕ್ಷಣೆಗೆ ಮಾತ್ರ ಅವಕಾಶ ಇರುತ್ತದೆ. ಪಕ್ಷಿಧಾಮದಲ್ಲಿ ಇಗ್ರೆಟ್ಸ್, ಹೆರಾನ್, ಕಾರ್ಮೊರೆಂಟ್ ಜಾತಿಯ ಪಕ್ಷಿಗಳಿದ್ದು, ಸುರಕ್ಷಿತವಾಗಿವೆ ಎಂದು ವಲಯ ಅರಣ್ಯಾಧಿಕಾರಿ ಸಯ್ಯದ್ ನದೀಂ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 18,276 ಕ್ಯೂಸೆಕ್ ಇದ್ದ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಗರಿಷ್ಠ 124.80 ಅಡಿ ಎತ್ತರದ ಜಲಾಶಯದಲ್ಲಿ 120.90 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ 3 ಅಡಿ ಬಾಕಿ ಇದೆ. ಜಲಾಶಯಕ್ಕೆ 20,315 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 87.60 ಅಡಿ (14.5 ಟಿಎಂಸಿ) ನೀರಿತ್ತು. 1300 ಕ್ಯೂಸೆಕ್ ಒಳ ಹರಿವು ಹಾಗೂ 930 ಕ್ಯೂಸೆಕ್ ಹೊರ ಹರಿವು ದಾಖಲಾಗಿತ್ತು.

ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಕಾರೇಕುರ, ಶ್ರೀನಿವಾಸ ಅಗ್ರಹಾರ, ಗಂಜಾಂ, ಮೇಳಾಪುರ ಇತರೆಡೆ ನದಿ ತೀರದ ಕೃಷಿ ಜಮೀನಿಗೆ ನೀರು ಹರಿಯಲಾರಂಭಿಸಿದೆ. ಪಟ್ಟಣದ ಸಾಯಿಬಾಬಾ ಆಶ್ರಮದ ಮೆಟ್ಟಿಲುಗಳು ಮುಳುಗಿವೆ. ತಾಲ್ಲೂಕಿನ ಬೆಳಗೊಳ ಬಳಿಯ ಬಲಮರಿ ಮತ್ತು ಎಡಮುರಿ ಫಾಲ್ಸ್ಗಳು ಧುಮ್ಮಿಕ್ಕುತ್ತಿವೆ.

ಸೂಚನೆ: ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು, ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ತಮ್ಮ ಆಸ್ತಿ– ಪಾಸ್ತಿ ಮತ್ತು ಜಾನುವಾರುಗಳ ರಕ್ಷಣೆ ಬಗ್ಗೆ ಎಚ್ಚರ ವಹಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಯಂತ್ ಸೂಚನೆ ನೀಡಿದ್ದಾರೆ.

ನಿಷೇಧಾಜ್ಞೆ ಜಾರಿ:

ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ನದಿ ತೀರದ ಅಪಾಯಕಾರಿ ಸ್ಥಳಗಳಲ್ಲಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ತಾಲ್ಲೂಕಿನ ಕಾರೇಕುರ, ಗಂಜಾಂ ನಿಮಿಷಾಂಬ ದೇವಾಲಯ, ಕಾರೇಕುರ, ಪಟ್ಟಣದ ಸ್ನಾನಘಟ್ಟ, ಕಾವೇರಿ ಸಂಗಮ, ಗೋಸಾಯಿಘಾಟ್, ಪಶ್ಚಿಮವಾಹಿನಿ, ವೆಲ್ಲೆಸ್ಲಿ ಸೇತುವೆ ಹಾಗೂ ರಂಗನತಿಟ್ಟು ಪಕ್ಷಿಧಾಮದ ಆಸುಪಾಸಿನಲ್ಲಿ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಸ್ಥಿ ವಿಸರ್ಜನೆ, ಕೃಷಿ ಚಟುವಟಿಕೆ, ಸ್ನಾನ ಇತರ ಕೆಸಗಳಿಗೆ ಜನ ಜಾನುವಾರು ನದಿ ತೀರಗಳಿಗೆ ತೆರಳಬಾರದು ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
.ಶ್ರೀರಂಗಪಟ್ಟಣ | ಕೆಆರ್ಎಸ್ ಭರ್ತಿಗೆ ಕೆಲವೇ ಅಡಿ ಬಾಕಿ.2–3 ದಿನಗಳಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಕೆಶಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.