ಮಂಡ್ಯ: ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತಮಿಳುನಾಡಿಗೆ ವರ್ಷಕ್ಕೆ 177.25 ಟಿಎಂಸಿ ಅಡಿ ನೀರು ಹರಿಸಬೇಕಿತ್ತು. ಪ್ರಸಕ್ತ ವರ್ಷ ಉತ್ತಮ ಮಳೆ ಸುರಿದ ಕಾರಣ ಜೂನ್ನಿಂದ ಇಲ್ಲಿಯವರೆಗೆ 273 ಟಿಎಂಸಿ ಅಡಿ ನೀರು ಹರಿದು ಹೋಗಿದೆ. ಅಂದರೆ ಹೆಚ್ಚುವರಿಯಾಗಿ 96 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ.

ಈ ವರ್ಷ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಪ್ರಕೃತಿದತ್ತವಾಗಿ ನಿವಾರಣೆಯಾಗಿದೆ. ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಪ್ರಸಕ್ತ ವರ್ಷ ಮೊದಲ ಬಾರಿಗೆ ಜೂನ್ನಲ್ಲೇ ಡ್ಯಾಂ ಭರ್ತಿಯಾಗಿ ಇತಿಹಾಸ ಬರೆದಿದೆ. ಬೆಂಗಳೂರಿಗೆ ವರ್ಷಕ್ಕೆ 31 ಟಿಎಂಸಿ ನೀರು ಕುಡಿಯುವ ನೀರಿಗೆ ಬೇಕಿದೆ. ಅಂದರೆ ಪ್ರತಿ ತಿಂಗಳು ಬೆಂಗಳೂರಿಗೆ 2.60 ಟಿಎಂಸಿ ನೀರಿನ ಅವಶ್ಯವಿದೆ. ಡ್ಯಾಂ ಭರ್ತಿಯಾಗಿರುವುದರಿಂದ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದ ಹಾರಂಗಿ, ಕೆಆರ್ಎಸ್, ಕಬಿನಿ, ಹೇಮಾವತಿ ಜಲಾಶಯಗಳು ಅಕ್ಟೋಬರ್ನಲ್ಲಿ ಭರ್ತಿಯಾಗಿ, 115 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರ ಜೊತೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮದ 6,576 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಇದರ ಜೊತೆಗೆ ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಕೆರೆಗಳು ಸಂಪೂರ್ಣ ಭರ್ತಿಯಾಗಿದ್ದು, ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

ಬಿಳಿಗೊಂಡ್ಲು ಜಲಮಾಪನ ಕೇಂದ್ರದಿಂದ ಜೂನ್ನಲ್ಲಿ 42.256 ಟಿಎಂಸಿ ಅಡಿ, ಜುಲೈನಲ್ಲಿ 103.514 ಟಿಎಂಸಿ ಅಡಿ, ಆಗಸ್ಟ್ನಲ್ಲಿ 51.943 ಟಿಎಂಸಿ, ಸೆಪ್ಟೆಂಬರ್ನಲ್ಲಿ 40.790 ಟಿಎಂಸಿ, ಅಕ್ಟೋಬರ್ನಲ್ಲಿ 31.344 ಟಿಎಂಸಿ ಅಡಿ ಸೇರಿದಂತೆ ಈ ವರ್ಷ ತಮಿನಾಡಿಗೆ ಇದುವರೆಗೆ 273 ಟಿಎಂಸಿ ಅಡಿ ನೀರು ಹರಿದುಹೋಗಿದೆ.

‘ಬೀದರ್ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆ ಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.