ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ: ತಡರಾತ್ರಿವರೆಗೂ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕೆ.

Published 15 ಜೂನ್ 2024, 17:35 IST
Last Updated 15 ಜೂನ್ 2024, 17:35 IST
ಅಕ್ಷರ ಗಾತ್ರ

ಮಂಡ್ಯ: ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಶನಿವಾರ ಭೇಟಿ ನೀಡಿದ ಎಚ್‌‌.ಡಿ.ಕುಮಾರಸ್ವಾಮಿ ಅವರು ರಾತ್ರಿ 11 ಗಂಟೆವರೆಗೂ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ನೂತನ ಸಂಸದರ ಕಚೇರಿ ಉದ್ಘಾಟಿಸಲು ಸಂಜೆ 4.30ಕ್ಕೆ ಬರಬೇಕಾದ ಎಚ್.ಡಿ.ಕೆ. ಅವರು ರಾತ್ರಿ 9ಕ್ಕೆ ಅಂದರೆ ಬರೋಬ್ಬರಿ ನಾಲ್ಕೂವರೆ ಗಂಟೆ ತಡವಾಗಿ ಬಂದರು‌.

ನಂತರ ರಾತ್ರಿ 10ರಿಂದ ರಾತ್ರಿ 11ರವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌ಎಲ್.ನಾಗರಾಜ್, ಎಸ್ಪಿ ಯತೀಶ್, ಸಿಇಒ ಶೇಖ್ ತನ್ವೀರ್ ಆಸೀಫ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT