ಮಂಡ್ಯ: ‘ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂ ದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಅರಣ್ಯಾಧಿಕಾರಿಗಳು ಒಕ್ಕಲೆಬ್ಬಿಸುವ ಪ್ರಯತ್ನ ಮಾಡಬೇಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಬುಧವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅರಣ್ಯ ಪ್ರದೇಶದಲ್ಲಿ ಜೀವನೋಪಾಯಕ್ಕಾಗಿ ಜೀವನ ನಡೆಸುತ್ತಿರುವ ಜನರ ಮೇಲೆ ಅಧಿಕಾರಿಗಳು ಒತ್ತಡ ಏರಬೇಡಿ’ ಎಂದು ಸಲಹೆ ನೀಡಿದರು.

ಈಗಾಗಲೇ ಸರ್ಕಾರದಿಂದಲೇ ಜಾಗ ಗುರುತಿಸಿ ಅವರಿಗೆ ಭೂಮಿ (ಹಕ್ಕು) ಪತ್ರವನ್ನು ನೀಡಲಾಗಿದೆ. ಅಂತಹ ಸ್ಥಳಗಳನ್ನು ಕೈಬಿಟ್ಟು ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ ಸರ್ವೆ ನಡೆಸಿ. ಅರಣ್ಯಾಧಿಕಾರಿಗಳು ಕಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಡುವ ಕಾರ್ಯ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸರ್ಕಾರದಿಂದ ಅವರಿಗೆ ನೀಡಲಾಗಿರುವ ನಿವಾಸಗಳಲ್ಲಿ ಕಡ್ಡಾಯವಾಗಿ ವಾಸಿಸಬೇಕು. ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ಅಂತಹ ಪ್ರಕರಣಗಳನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಗಣಿ ಅಧಿಕಾರಿಗಳು ಹೆಚ್ಚಿನ ದಕ್ಷತೆಯಿಂದ ಕಾರ್ಯ ನಿರ್ವಹಿಸಿ. ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ಗಣಿಗಾರಿಕೆ ಅಥವಾ ಭೂ ಸಂಪತ್ತನ್ನು ಲೂಟಿ ಮಾಡುವ ಪ್ರಕರಣಗಳು ದಾಖಲಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಿ. ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಚಿವರು ಎಚ್ಚರಿಸಿದರು.

ಉಪ ವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಆಧಿಕಾರಿ ಪುಷ್ಪಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

‘ಶಿಂಷಾ ನದಿಯಲ್ಲಿ ಮರಳು ಅಕ್ರಮ ಸಾಗಣೆ’

ಜಿಲ್ಲಾಧಿಕಾರಿ ಕುಮಾರ ಮಾತನಾಡಿ ‘ಮದ್ದೂರಿನ ಶಿಂಷಾ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಅಕ್ರಮ ಸಾಗಣೆ ನಡೆಯುತ್ತಿದೆ ಎಂದು ಮಾಹಿತಿ ಇದೆ. ಪ್ರಸ್ತುತ 17ಕ್ಕೂ ಹೆಚ್ಚು ಮರಳು ದಂಧೆ ಪ್ರಕರಣ ದಾಖಲಾಗಿದ್ದು ಕಾನೂನು ಕ್ರಮ ಜಾರಿಗೊಳಿಸಲಾಗಿದೆ. ಗಣಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಮರಳು ಅಕ್ರಮ ಸಾಗಾಣಿಕೆಗೆ ತಿಲಾಂಜಲಿ ನೀಡಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ ‘ನಾಗಮಂಗಲದಲ್ಲಿ ಬ್ಲಾಸ್ಟಿಂಗ್ನಿಂದ ಸಾವು ಸಂಭವಿಸಿದೆ. ಅರಣ್ಯ ಪ್ರದೇಶಗಳಲ್ಲಿ ಅನುಮತಿ ಇಲ್ಲದೆ ಸ್ಫೋಟಕ ವಸ್ತುಗಳನ್ನು ಬಳಸದಂತೆ ಕ್ರಮವಹಿಸಿ. ನಿಯಮ ಮೀರಿ ಯಾರಾದರೂ ದುಷ್ಕರ್ಮಿಗಳು ಸ್ಫೋಟಕಗಳನ್ನು ಸ್ಫೋಟಿಸಿದರ ಅಂತಹವರು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.