ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರು ಕೊಲೆ ಪ್ರಕರಣದಲ್ಲಿ ಶಾಂತಿ ಕದಡುವ ಹೇಳಿಕೆ: ಆರಗ ವಿರುದ್ಧ ದೂರು

Last Updated 9 ಏಪ್ರಿಲ್ 2022, 12:08 IST
ಅಕ್ಷರ ಗಾತ್ರ

ಮಂಡ್ಯ: ಬೆಂಗಳೂರಿನ ಚಂದ್ರು ಕೊಲೆ ಪ್ರಕರಣದಲ್ಲಿ ಶಾಂತಿ ಕದಡುವ ಹೇಳಿಕೆ ನಿಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಗುರುವಾರ ಪೂರ್ವ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜವಾಬ್ದಾರಿಯಿಂದ ವರ್ತಿಸಬೇಕಾದ ಗೃಹಸಚಿವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ಧಾರೆ. ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ದಲಿತ ಯುವಕನನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ವಾಸ್ತವವಾಗಿ ಅಪಘಾತದ ನಂತರ ನಡೆದ ಘರ್ಷಣೆಯಲ್ಲಿ ಯುವಕ ಕೊಲೆಯಾಗಿದ್ದಾನೆ ಎಂಬ ವಿಚಾರ ಗೊತ್ತಾಗಿದೆ.

ಶಾಂತಿ–ಸುವ್ಯವಸ್ಥೆ ಕಾಪಾಡಬೇಕಾದ ಗೃಹಸಚಿವರೇ ಈ ರೀತಿ ಹೇಳಿಕೆ ನೀಡಿರುವುದು ಅಕ್ಷ್ಯಮ್ಯ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗೃಹಸಚಿವರೊಬ್ಬರು ಅತ್ಯಂತ ಕೀಳಾಗಿ ನಡೆದುಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾ ಮಾಡಬೇಕು, ಅವರ ವಿರುದ್ಧ ಪ್ರಕರಣ ದಾಖಲು ಮಾಡಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT