ಭಾನುವಾರ, ಅಕ್ಟೋಬರ್ 24, 2021
21 °C

ಮಂಡ್ಯ: ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೆಆರ್‌ಎಸ್‌ ಜಲಾಶಯದ ಬಳಿ ಇರುವ ಕಾವೇರಿ ತಾಯಿ ಪ್ರತಿಮೆಗೆ ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು.

ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಬಂದಿರುವ ಅವರು ಕೆಆರ್‌ಎಸ್‌ಗೂ ಭೇಟಿ ನೀಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಪತ್ನಿ ಚನ್ನಮ್ಮ ಅವರ ಜೊತೆ ಸಾಂಪ್ರದಾಯಿಕ ರೇಷ್ಮೆ ಪಂಚೆ, ಶರ್ಟ್‌ ತೊಟ್ಟು ಪೂಜೆಯಲ್ಲಿ ಪಾಲ್ಗೊಂಡರು. ಜೋತಿಷಿ ಭಾನುಪ್ರಕಾಶ್‌ ಶರ್ಮಾ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಆರ್‌.ಅಶೋಕ್‌, ಕೆ.ಸಿ.ನಾರಾಯಣಗೌಡ, ಬೈರತಿ ಬಸವರಾಜ್‌, ಸುನೀಲ್‌ ಕುಮಾರ್‌, ಶಾಸಕ ಅರವಿಂದ ಬೆಲ್ಲದ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು