ಮದ್ದೂರು: ‘ಸಮಾಜದಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ಮುಕ್ತ ಮಂಡ್ಯ ಜಿಲ್ಲೆ ಅಭಿಯಾನದ ಅಂಗವಾಗಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೃಹತ್ ಜನಜಾಗೃತಿ ಜಾಥಾ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆಲವು ಪೋಷಕರು ಅಜ್ಞಾನ ಹಾಗೂ ಅರಿವಿನ ಕೊರತೆಯಿಂದ 18 ವರ್ಷಕ್ಕೂ ಮೊದಲೇ ತಮ್ಮ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವ ಮೂಲಕ ಅವರ ಭವಿಷ್ಯವನ್ನು ಬಲಿ ಕೊಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್ ಮಾತನಾಡಿ, ‘2 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಸಾಕಷ್ಟು ದಾಖಲಾಗಿದ್ದವು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಜಾಥಾ ಮತ್ತು ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಈ ವರ್ಷ 14 ಪ್ರಕರಣಗಳಿಗೆ ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ತರಲು ಎಲ್ಲರು ಮುಂದಾಗಬೇಕೆಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರದ ಉಗ್ರನರಸಿಂಹಸ್ವಾಮಿ ದೇವಾಲಯದಿಂದ ತಾಲ್ಲೂಕು ಕ್ರೀಡಾಂಗಣದವರೆಗೂ ಜಾಥಾ ನಡೆಯಿತು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್. ಹರಿಣಿ, ಎನ್.ಸಿ. ನಳಿನಿ, ಡಿಡಿಪಿಐ ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಆಶಾ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ನಗರಸಭೆ ಪೌರಾಯುಕ್ತೆ ಎಸ್.ಎನ್. ರಾಧಿಕಾ ಪಾಲ್ಗೊಂಡಿದ್ದರು.

ಬಾಲ್ಯ ವಿವಾಹ ನಿಯಂತ್ರಿಸಲು ಸಹಕರಿಸಿ ಸಂಚಾರ ನಿಯಮಗಳನ್ನು ಪಾಲಿಸಿ ಮಂಡ್ಯದಲ್ಲಿ ವಾಕಥಾನ್ ಮತ್ತು ಸೈಕಲ್ ಜಾಥಾ

ರಸ್ತೆ ಸುರಕ್ಷತೆಗಾಗಿ ಜಾಗೃತಿ ಜಾಥಾ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಮಂಡ್ಯ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಕುಮಾರ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕುಮಾರ ಮಾತನಾಡಿ ಅತಿವೇಗ ಮದ್ಯಪಾನ ಮಾಡಿ ವಾಹನ ಚಾಲನೆ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದರು. ರಸ್ತೆ ಸುರಕ್ಷತೆ ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸುವುದು ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.

ಬೃಹತ್ ಕಾಲ್ನಡಿಗೆ ಮತ್ತು ಸೈಕಲ್ ಜಾಥಾ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಂಜಯ ಟಾಕೀಸ್ ವೃತ್ತದವರಿಗೆ ತಲುಪಿತು. ನ್ಯಾಯಾಧೀಶ ಎಂ.ಆನಂದ್ ಪ್ರಾದೇಶಿಕ ಸಾರಿಗೆ ಅಧಿಕಾರಿ ಟಿ.ಜೆ. ಹೇಮಾವತಿ ಪ್ರಾದೇಶಿಕ ಸಾರಿಗೆ ಕಚೇರಿಯ ನಿವೃತ್ತ ಅಧೀಕ್ಷಕ ಎಂ.ಜಿ.ಎನ್. ಪ್ರಸಾದ್ ಸ್ಕೌಟ್ ಅಂಡ್ ಗೈಡ್ಸ್ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.