‘ಹೆಣ್ಣಿನ ಮೇಲಿನ ದಬ್ಬಾಳಿಕೆ ಕೊನೆಯಾಗಲಿ’
ಲೇಖಕಿ ಎಂ.ಎಸ್. ಆಶಾದೇವಿ ಮಾತನಾಡಿ ಅತ್ಯಾಚಾರಕ್ಕೆ ಒಳಗಾದ ಹೆಣ್ಣು ಮಕ್ಕಳನ್ನು ಏಕೆ ಸಂತ್ರಸ್ತೆ ಎನ್ನಬೇಕು. ಅತ್ಯಾಚಾರ ಎಸಗಿದವರನ್ನು ಸಾಮಾಜಿಕವಾಗಿ ಬಹಿಷ್ಕಾರ ಹಾಕಬೇಕು. ಅವಳ ದೇಹದ ಮೇಲೆ ದೌರ್ಜನ್ಯ ನಡೆದಿದೆಯೇ ಹೊರತು ಅವಳ ಚೈತನ್ಯದ ಮೇಲೆ ಅಲ್ಲ ಎನ್ನುವುದನ್ನು ನಾವು ಮತ್ತು ನೀವು ಅರ್ಥ ಮಾಡಿಕೊಳ್ಳಬೇಕು. ಸಮಾಜದಲ್ಲಿ ಅತ್ಯಾಚಾರ ಹಾಗೂ ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ ದಬ್ಬಾಳಿಕೆಯನ್ನು ಕೊನೆಗಾಣಿಸಬೇಕಿದೆ. ಅಂತಹ ನಿರ್ಧಾರಗಳನ್ನು ಸಮಾಜದಲ್ಲಿ ತೆಗೆದುಕೊಳ್ಳುವುದು ಮುಖ್ಯವಾಗಿದೆ’ ಎಂದು ತಿಳಿಸಿದರು.