ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.6ರಂದು ಮಂಡ್ಯ ತಾಲ್ಲೂಕಿನ ಬೇವುಕಲ್ಲು ಗ್ರಾಮದಲ್ಲಿರುವ ಬೀರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ತುರ್ತು ಪರಿಸ್ಥಿತಿಗಳಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.