ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

Photos: ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Published : 30 ಜೂನ್ 2025, 9:22 IST
Last Updated : 30 ಜೂನ್ 2025, 9:22 IST
ಫಾಲೋ ಮಾಡಿ
Comments
 ಕೃಷ್ಣರಾಜಸಾಗರ ಜಲಾಶಯಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎನ್.ಚಲುವರಾಯಸ್ವಾಮಿ, ಎಚ್.ಸಿ.ಮಹದೇವಪ್ಪ ಬಾಗಿನ ಅರ್ಪಿಸಿದರು.

ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯವು ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಭರ್ತಿಯಾಗಿದ್ದು, ಹೊಸ ದಾಖಲೆ ಸೃಷ್ಟಿಸಿದೆ

 4ನೇ ಬಾರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು, ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಪ್ರಸ್ತುತ 121 ಅಡಿ ನೀರಿದ್ದು, ಭರ್ತಿಗೆ 3 ಅಡಿ ಮಾತ್ರ ಬಾಕಿ ಇದೆ.

ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಕಾರಣ, ಜಲಾಶಯ ಜೂನ್‌ನಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾಣವಾದ 1931ನೇ ಸಾಲಿನಿಂದ ಇಲ್ಲಿಯವರೆಗೆ ಅಂದರೆ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ರೈತರ ಸಂತಸವನ್ನು ಹೆಚ್ಚಿಸಿದೆ.

 ಜಲಾಶಯಕ್ಕೆ ಪ್ರಸ್ತುತ 52 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, 51 ಸಾವಿರ ಕ್ಯೂಸೆಕ್‌ ನೀರನ್ನು ಡ್ಯಾಂನಿಂದ ನದಿಗೆ ಬಿಡಲಾಗುತ್ತಿದೆ. ಈ ಜಲಾಶಯದಲ್ಲಿ ಸಂಗ್ರಹವಾದ ನೀರನ್ನು ಮುಖ್ಯವಾಗಿ ನೀರಾವರಿಗೆ ಮತ್ತು ಕುಡಿಯುವ ನೀರಿಗೆ ಬಳಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT