ಮಂಡ್ಯ: ಮದ್ದೂರು ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 28ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಯಾವುದೇ ಲೋಪವಿಲ್ಲದೇ ಆಯೋಜಿಸಲು ಶಿಷ್ಟಾಚಾರ, ಆಹಾರ, ವಸ್ತುಪ್ರದರ್ಶನ, ಕುಡಿಯುವ ನೀರು ಹಾಗೂ ಸ್ವಚ್ಛತೆ, ಭದ್ರತೆ, ವೇದಿಕೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದರು.

ಮದ್ದೂರು ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ₹1400 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೃಹತ್ ಕಾರ್ಯಕ್ರಮ ಆಯೋಜನೆ ಮೂಲಕ ಸಿ.ಎಂ ಅವರಿಂದ ಚಾಲನೆ ಸಿಗಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

ಶಿಷ್ಟಾಚಾರ ಪಾಲಿಸಲು ಡಿಸಿ ಸೂಚನೆ

ಜಿಲ್ಲಾಧಿಕಾರಿ ಕುಮಾರ ಮಾತನಾಡಿ ಅಧಿಕಾರಿಗಳು ತಮ್ಮ ಇಲಾಖೆಯಿಂದ ಉದ್ಘಾಟನೆಯಾಗುವ ಕಾಮಗಾರಿಯ ವಿವರವನ್ನು ನಿಖರವಾಗಿ ತಿಳಿಸಬೇಕು ಹಾಗೂ ಶಿಷ್ಟಾಚಾರದಂತೆ ಸಚಿವರು ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಹೆಸರುಗಳು ಆಹ್ವಾನ ಪತ್ರಿಕೆಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಂಡು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ನೀಡುವ ಉಪಾಹಾರ ವಿತರಣೆಗೆ ಅಗತ್ಯ ಕೌಂಟರ್ ಗಳ ವ್ಯವಸ್ಥೆ ಮಾಡಿ ಆಹಾರ ಗುಣಮಟ್ಟವನ್ನು ಪರೀಕ್ಷೆಗೆ ಒಳಪಡಿಸಿ. ಅಗತ್ಯ ಸ್ಥಳಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಿ ಎಂದರು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸ್ಥಳಗಳಲ್ಲಿ ಮೊಬೈಲ್ ಶೌಚಾಲಯಗಳನ್ನು ಸ್ಥಾಪಿಸಬೇಕು. ಮಳೆಗಾಲ ಇರುವುದರಿಂದ ಪಾರ್ಕಿಂಗ್ ಸ್ಥಳವನ್ನು ಸಮತಟ್ಟು ಮಾಡಿ ವಾಹನ ನಿಲುಗಡೆಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.