ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲಗೂರು: ತೆಂಗು, ಅಡಿಕೆ ತೋಟ ಬೆಂಕಿಗೆ ಆಹುತಿ

Published 6 ಫೆಬ್ರುವರಿ 2024, 13:22 IST
Last Updated 6 ಫೆಬ್ರುವರಿ 2024, 13:22 IST
ಅಕ್ಷರ ಗಾತ್ರ

ಹಲಗೂರು: ಸಮೀಪದ ಸಾಗ್ಯ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ವಿವಿಧ ತಳಿಯ ಮರಗಳು ಬೆಂಕಿಗೆ ಆಹುತಿಯಾಗಿದೆ.

‘ಸಾಗ್ಯ ಗ್ರಾಮದ ರೈತ ರಾಜಣ್ಣ ಎಂಬುವವರು ತಮ್ಮ ಮೂರು ಎಕರೆ ಜಮೀನಿನಲ್ಲಿ ತೆಂಗು, ಅಡಿಕೆ, ಮಹಾಘನಿ, ಮಾವು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಬೆಳೆಸಿದ್ದರು. ಸೋಮವಾರ ಮಧ್ಯಾಹ್ನ ತೆಂಗಿನ ಮರಕ್ಕೆ ವಿದ್ಯುತ್ ಸ್ಪರ್ಶ ಆಗಿದ್ದು, ಬೆಂಕಿ ಇಡೀ ತೋಟಕ್ಕೆ ಆವರಿಸಿಕೊಂಡಿದೆ. ತೋಟದಲ್ಲಿ ನೀರು ಹಾಯಿಸಲು ಅಳವಡಿಸಿದ್ದ ಹನಿ ನೀರಾವರಿ ಪೈಪುಗಳು ಸುಟ್ಟು ಹೋಗಿವೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು’ ಎಂದು ರೈತ ರಾಜಣ್ಣ ಆಗ್ರಹಿಸಿದರು.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT