ಮಳವಳ್ಳಿ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿ ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸಲಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ₹1.43 ಕೋಟಿ ವೆಚ್ಚದ ಎರಡು ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ಹತ್ತಾರು ಯೋಜನೆಗಳ ಮೂಲಕ ಹಣ ತರಲಾಗಿದೆ. ಪ್ರಮುಖವಾಗಿ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದ ಶೆಟ್ಟಿಹಳ್ಳಿ ಗ್ರಾಮಸ್ಥರ ಸಾಕಷ್ಟು ವರ್ಷಗಳ ಬೇಡಿಕೆಯಾಗಿದ್ದ ಈ ಎರಡು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ಸಮೀಪವಿರುವ ಈ ಗ್ರಾಮದ ಪ್ರಗತಿಗೆ ಮತ್ತಷ್ಟು ನೆರವು ನೀಡಲಾಗುವುದು ಎಂದು ಹೇಳಿದರು.