ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರಿಗೆ ತೊಂದರೆಯಾಗದಂತೆ ನಾಲೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಚಲುವರಾಯಸ್ವಾಮಿ

Published 19 ಜೂನ್ 2024, 6:17 IST
Last Updated 19 ಜೂನ್ 2024, 6:17 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಕೆಆರ್‌ಎಸ್‌ನಿಂದ ನೀರು ಬಿಡುಗಡೆ ಮಾಡಲು ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೂಚಿಸಿದರು.

ಕೆ‌ಆರ್‌ಎಸ್ ಹೋಟೆಲ್ ಮಯೂರಾ ಸಭಾಂಗಣದಲ್ಲಿ ಬುಧವಾರ ₹300 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿ.ಸಿ. ಮುಖ್ಯ ನಾಲೆ ಆಧುನೀಕರಣ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ವಿಶ್ವೇಶ್ವರಯ್ಯ ನಾಲೆಯು ಕೃಷ್ಣರಾಜ ಜಲಾಶಯದ ಎಡದಂಡೆಯಿಂದ ಪ್ರಾರಂಭಗೊಳ್ಳುತ್ತದೆ. ಸದರಿ ನಾಲೆಯ ಕಾಮಗಾರಿಯು ಸುಮಾರು ,1931 ರಲ್ಲಿ ಪೂರ್ಣಗೊಂಡಿರುತ್ತದೆ. ಇದೀಗ ಆಧುನೀಕರಣ ಕಾಮಗಾರಿ ಕೈಗೊಂಡಿದ್ದು, 40 ಕಿ.ಮೀ ನಲ್ಲಿ 24 ಕಿ.ಮೀ ಪೂರ್ಣಗೊಂಡಿದ್ದು, 4 ಕಿ.ಮೀ ಪ್ರಗತಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಕುಮಾರ, ಕಾ.ನೀ.ನಿ.ನಿ ಅಧೀಕ್ಷಕ ಎಂಜಿನಿಯರ್ ರಘುರಾಂ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT