ಮಳವಳ್ಳಿ: ಭಾರತೀಯ ವಕೀಲ ಪರಿಷತ್ತಿನ ಸದಸ್ಯರಾಗಿರುವ ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಘಟಕದ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ ಒತ್ತಾಯಿಸಿದ್ದಾರೆ.

ಏ.15ರಂದು ವೈ.ಆರ್.ಸದಾಶಿವರೆಡ್ಡಿ ಅವರ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈಗಾಗಲೇ ವಕೀಲರ ರಕ್ಷಣೆಗಾಗಿ ಕಾಯ್ದೆ ಜಾರಿಯಾಗಿದ್ದರೂ, ದುಷ್ಕರ್ಮಿಗಳು ಯಾವುದೇ ಕಾನೂನಿನ ಭಯ ಇಲ್ಲದೇ ಕೃತ್ಯ ಎಸಗಿದ್ದಾರೆ. ಹೀಗಾಗಿ ಪೊಲೀಸರು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಕೀಲರ ಸಮುದಾಯದಲ್ಲಿ ಆತಂಕ ಸೃಷ್ಟಿಯಾಗಿದೆ. ಇಂತಹ ಘಟನೆ ಮರುಕಳಿಸದಂತೆ ಗೃಹ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.