ಮಂಡ್ಯ: ಬಡವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಜನೌಷಧಿ ಕೇಂದ್ರ ತರೆಯಲಾಗಿದ್ದು, ಅದನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸುವಂತೆ ಆದೇಶ ನೀಡಿರುವುದು ಸರಿಯಲ್ಲಿ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಕೆ.ಎಸ್. ವಿಜಯ್ಕುಮಾರ್ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇಶದಾದ್ಯಂತ ಯಶಸ್ವಿ ಮಾದರಿಯಾಗಿ ಹೊರಹೊಮ್ಮಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಕಡಿಮೆ ವೆಚ್ಚದಲ್ಲಿ ಲಕ್ಷಾಂತರ ಜನರಿಗೆ ಗುಣಮಟ್ಟದ ಔಷಧ ಒದಗಿಸುತ್ತಿವೆ. ರಾಜ್ಯದಲ್ಲಿಯೂ ನೂರಾರು ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಅವುಗಳನ್ನು ಮುಚ್ಚಲು ಯತ್ನಿಸಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಕಿಡಿಕಾರಿದ್ದಾರೆ.

‘ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಔಷಧ ಒದಗಿಸುತ್ತಿರುವ ಈ ಕೇಂದ್ರಗಳನ್ನು ಮುಚ್ಚುವ ಅಗತ್ಯವೇನಿದೆ’ ಎಂದು ಪ್ರತಿಕಾ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.