ಮಂಡ್ಯ: ‘100ಕ್ಕೂ ಹೆಚ್ಚು ಜನರ ಮೊದಲ ಪಟ್ಟಿಯು ಬುಧವಾರ (ಮಾರ್ಚ್ 22 ರಂದು) ಬಿಡುಗಡೆಯಾಗಲಿದೆ. ಈ ವರ್ಷ ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಅಮಾವಾಸ್ಯೆ ಪೂಜೆ ಅಂಗವಾಗಿ ನಾಗಮಂಗಲ ತಾಲ್ಲೂಕು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಅವರು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
‘ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶವಿದೆ. ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಕ್ಷೇತ್ರ ಯಾವುದಾದರೂ ಆಯ್ಕೆ ಮಾಡಿಕೊಳ್ಳಲಿ. ಡಿ.ಕೆ.ಸುರೇಶ್ ಅವರಿಗೆ ಸಂಸದರಾಗಿಯೇ ಉಳಿಯುವ ಇಚ್ಛೆ ಇದೆ. ಯಾರೇ ಅಭ್ಯರ್ಥಿಯಾದರೂ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರೇ ಅಭ್ಯರ್ಥಿ ಎಂದು ಮತ ಕೇಳಿ ಗೆಲ್ಲಿಸಿಕೊಂಡು ಬರುತ್ತೇವೆ’ ಎಂದು ಹೇಳಿದರು.
‘ಚಿಂಚನಸೂರು ಸ್ವಲ್ಪ ಬದಲಾವಣೆಯಾಗಿ ಪಕ್ಷ ಬಿಟ್ಟಿದ್ದರು. ಈಗ ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಬೇಕಾದಷ್ಟು ಜನರು ನಮ್ಮ ಪಕ್ಷದಿಂದ ಬಿಜೆಪಿಗೆ ಹೋಗಿದ್ದಾರೆ, ಅಲ್ಲಿಂದ ನಮ್ಮಲ್ಲಿಗೆ ಬಂದಿದ್ದಾರೆ. ರಾಜಕೀಯದಲ್ಲಿ ಇವೆಲ್ಲ ಸರ್ವೇ ಸಾಮಾನ್ಯ’ ಎಂದು ತಿಳಿಸಿದರು.
‘ನಟಿ ರಮ್ಯಾ ಸರ್ಧೆ ವಿಚಾರವನ್ನು ಅವರನ್ನೇ ಕೇಳಬೇಕು. ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರುವ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.