ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರಿಗೆ ನೀಡಿದ್ದ ಭರವಸೆ ಈಡೇರಿಸುವೆ: ಶಾಸಕ ನರೇಂದ್ರಸ್ವಾಮಿ

Published 9 ಮಾರ್ಚ್ 2024, 14:35 IST
Last Updated 9 ಮಾರ್ಚ್ 2024, 14:35 IST
ಅಕ್ಷರ ಗಾತ್ರ

ಹಲಗೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಬದ್ಧನಾಗಿದ್ದು, ಎಲ್ಲಾ ಭರವಸೆಗಳನ್ನೂ ಅವಧಿಯೊಳಗೆ ಹಂತ ಹಂತವಾಗಿ ಈಡೇರಿಸುತ್ತೇನೆ ಎಂದು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಭರವಸೆ ನೀಡಿದರು.

ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅನುದಾನದಲ್ಲಿ ₹2 ಕೋಟಿ ವೆಚ್ಚದಲ್ಲಿ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮತ್ತು ₹3 ಕೋಟಿ ವೆಚ್ಚದಲ್ಲಿ ಧನಗೂರು ಗ್ರಾಮದಲ್ಲಿ ನೂತನ ಎಂ.ಯು.ಎಸ್.ಎಸ್. ವಿದ್ಯುತ್ ವಿತರಣ ಕೇಂದ್ರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯತ್ತಂಬಾಡಿ ಗ್ರಾಮದಲ್ಲಿ ಕಾಳೇಶ್ವರ ಸ್ವಾಮಿ ದೇವಾಲಯ, ಬಾಣಸಮುದ್ರ ಗ್ರಾಮದಲ್ಲಿ ಬೆಂಗಳೂರಯ್ಯ ದೇವಾಲಯದ ಬಳಿ ಸಮುದಾಯ ಭವನಗಳ ನಿರ್ಮಾಣದ ಭರವಸೆಯಂತೆ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

ಕಸಬಾ ಹೋಬಳಿಯ ಅಂತರವಳ್ಳಿ, ಯತ್ತಂಬಾಡಿ, ಬೆಳತೂರು, ಅಪ್ಪಾಜಯ್ಯನದೊಡ್ಡಿ, ಬಾಣಗಹಳ್ಳಿ, ಹುಲ್ಲಹಳ್ಳಿ, ಹುಲ್ಲಾಗಾಲ, ದಡಮಹಳ್ಳಿ, ಬಾಣಸಮುದ್ರ, ಕೋಡಿಪುರ, ಚೆನ್ನೀಪುರ, ಡಿ.ಹಲಸಹಳ್ಳಿ, ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆಚಾಲನೆ ನೀಡಲಾಗಿದೆ. ಇನ್ನೂ ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದೆ ಎಂದರು. ಬಾಣಸಮುದ್ರ ಗೇಟ್‌ನಲ್ಲಿ  ಬಸ್ ತಂಗುದಾಣ ನಿರ್ಮಿಸಬೇಕು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕೆ ಎಲ್ಲ ಸರ್ಕಾರಿ ಬಸ್ಸುಗಳು ನಿಲ್ಲಿಸಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.

ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ, ಕಾರ್ಯಾದ್ಯಕ್ಷ ಶಿವಮಾದೇಗೌಡ, ಮುಖಂಡರಾದ ಆರ್.ಎನ್.ವಿಶ್ವಾಸ್, ಮಾದೇಶ್, ಎಚ್.ಆರ್.ಶಿವಮಾದೇಗೌಡ, ಚಂದ್ರಕುಮಾರ್, ಕುಂತೂರು ಗೋಪಾಲ್, ಎಂ.ಶಿವಕುಮಾರ್, ಕೃಷ್ಣಪ್ಪ, ಕೆ.ಎಸ್.ದ್ಯಾಪೇಗೌಡ, ಸಿ.ಪಿ.ರಾಜು, ಅಂಬರೀಶ್, ರೋಹಿತ್, ಚಿಕ್ಕಸ್ವಾಮಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT