ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮದ್ದೂರು | ರಾಜ್ಯಪಾಲರ ವಿರುದ್ಧ ಮದ್ದೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Published : 20 ಆಗಸ್ಟ್ 2024, 14:41 IST
Last Updated : 20 ಆಗಸ್ಟ್ 2024, 14:41 IST
ಫಾಲೋ ಮಾಡಿ
Comments

ಮದ್ದೂರು: ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರೊಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಕೆ.ಎಂ. ಉದಯ್ ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ಶಾಸಕ ಕೆ.ಎಂ. ಉದಯ್ ಮಾತನಾಡಿ, ‘ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಸಿಎಂ ವಿರುದ್ಧ ಪ್ರೊಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಕೇಂದ್ರ ಹಾಗೂ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಸೇರಿದಂತೆ ಹಲವರ ವಿರುದ್ಧ ಪ್ರೊಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲರು, ಇದೀಗ ಸಿದ್ದರಾಮಯ್ಯ ಅವರ ವಿರುದ್ಧ ಮಾತ್ರ ಇಬ್ಬಗೆ ನೀತಿಯನ್ನು ಅನುಸರಿಸುತ್ತಿರುವುದು  ಎಷ್ಟು ಸರಿ? ಇಂತಹ ರಾಜ್ಯಪಾಲರನ್ನು ಹಿಂದೆ ನೋಡಿರಲಿಲ್ಲ, ಮುಂದೆ ನೋಡುವುದೂ ಬೇಡ’ ಎಂದು ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಕೊಲ್ಲಿ ವೃತ್ತದಿಂದ ಪೇಟೆ ಬೀದಿಯ ಮೂಲಕ ತಾಲ್ಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ತಾಲ್ಲೂಕು ಕಚೇರಿಯ ಮುಂದೆ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಜಮಾಯಿಸಿ ರಾಜ್ಯಪಾಲರ ಪ್ರತಿಕೃತಿ ದಹಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಸೋಮಶೇಖರ್ ಅವರ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಯಿತು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಬಸವರಾಜು, ಅಜ್ಜಹಳ್ಳಿ ರಾಮಕೃಷ್ಣ, ಜಿಲ್ಲಾ ಕಿಸಾನ್ ಕಾಂಗ್ರೆಸ್ ನ ಅಧ್ಯಕ್ಷ ಮೋಹನ್ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಡಘಟ್ಟ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜೀವ್, ನಾಗೇಗೌಡ ಚಿದಂಬರ್,ಆರಿಫ್ ಹಾಜರಿದ್ದರು.

ಪ್ರತಿಭಟನೆ

ಪ್ರತಿಭಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT