ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಹೋರಾಟಕ್ಕೆ ಕಾಂಗ್ರೆಸ್ ನಿರ್ಣಯ

ಬಿಜೆಪಿಯಿಂದ ಬೆದರಿಕೆ ರಾಜಕಾರಣ: ರಾಷ್ಟ್ರಪತಿ–ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ
Last Updated 9 ಸೆಪ್ಟೆಂಬರ್ 2020, 14:29 IST
ಅಕ್ಷರ ಗಾತ್ರ

ಮೈಸೂರು: ‘ಬಿಜೆಪಿ ಬೆದರಿಕೆಯ ರಾಜಕಾರಣ ನಡೆಸುತ್ತಿದೆ. ಇದಕ್ಕೆ ಮಣಿಯುವುದು ಬೇಡ. ಕಾನೂನಿನ ಹೋರಾಟವನ್ನೇ ನಡೆಸೋಣ’ ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್, ಮಂಜುಳಾ ಮಾನಸ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಲಾಯಿತು. ಕಾನೂನು ಮೂಲಕವೇ ಹೋರಾಟ ನಡೆಸಲು ನಿರ್ಧರಿಸಲಾಯಿತು.

‘ಪ್ರತಿಭಟನೆ ಬೇಡ. ಕಾನೂನಾತ್ಮಕ ಹೋರಾಟ ನಡೆಸೋಣ. ಕೆಪಿಸಿಸಿ ಹಾಗೂ ವಿರೋಧ ಪಕ್ಷದ ನಾಯಕರಿಗೆ ಸಮಗ್ರ ವರದಿ ನೀಡುವುದು. ಚುನಾಯಿತ ಜನಪ್ರತಿನಿಧಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದು. ಹುಣಸೂರು ಉಪ ಚುನಾವಣೆ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಮೇಲೆ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆ ವಿಚಾರದಲ್ಲೂ ಕಾನೂನಾತ್ಮಕ ಹೋರಾಟ ನಡೆಸಲು’ ಸಭೆ ನಿರ್ಣಯ ಕೈಗೊಂಡಿತು.

ಕೆಪಿಸಿಸಿ ವಕ್ತಾರರ ಪರ ನಿಲುವು ವ್ಯಕ್ತಪಡಿಸಿದ ಸಭೆ, ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿತು. ಬಿಜೆಪಿ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ರಾಜ್ಯಪಾಲರಿಗೆ, ರಾಷ್ಟ್ರಪತಿಗೆ ದೂರು ನೀಡುವ ನಿರ್ಣಯ ಅಂಗೀಕರಿಸಿತು.

ಕೆಪಿಸಿಸಿಯ ಪದಾಧಿಕಾರಿಗಳು, ಜಿಲ್ಲಾ ಘಟಕದ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT