ಭಾರತೀನಗರ: ‘ಇಲ್ಲಿಯ ಸಿರಿ ಕನ್ವೆನ್ಸನ್ ಹಾಲ್ನಲ್ಲಿ ಮೇ 30ರಂದು ಬೆಳಿಗ್ಗೆ 10.30ಕ್ಕೆ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರ ಸಮಾವೇಶ ನಡೆಯಲಿದೆ’ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಚಿದಂಬರಮೂರ್ತಿ ತಿಳಿಸಿದರು.

‘ಸಮಾವೇಶದ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ, ಅಧ್ಯಕ್ಷರ ಪದಗ್ರಹಣ, ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ತಾಲ್ಲೂಕಿನ 5 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಷ್ಕಾರ, ಮನ್ಮುಲ್ ನಿರ್ದೇಶಕರಿಗೆ ಅಭಿನಂದನೆಯನ್ನು ಆಯೋಜಿಸಲಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭಾವಚಿತ್ರವನ್ನು ಮಂಡ್ಯ ವೃತ್ತದಿಂದ ಮೆರವಣಿಗೆ ಮಾಡಲಾಗುತ್ತದೆ. ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಲಿದ್ದು, ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ವೆಂಕಟರಮಣಗೌಡ, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಎಂ.ಎನ್.ಶ್ರೀಧರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಅಮೀನ್ ಶಿವಲಿಂಗಯ್ಯ, ಎಂ.ಟಿ.ತಿಮ್ಮಯ್ಯ, ಈ.ರುದ್ರಯ್ಯ, ಅಣ್ಣೂರು ನಿರಂಜನ, ಚಿನ್ನಸ್ವಾಮಿ, ಗುಡಿಗೆರೆ ಪ್ರಸಾದ್, ಕೆಂಪರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.