ಮಳವಳ್ಳಿ: ತಾಲ್ಲೂಕಿನ ಚನ್ನಪಿಳ್ಳೆಕೊಪ್ಪಲು ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಸಂವಿಧಾನ ದಿನಾಚರಣೆ ಹಾಗೂ ಕನ್ನಡ ರಾಜೋತ್ಸವ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ರಂಗಭೂಮಿ ಹಿರಿಯ ಕಲಾವಿದ ತಿ.ನರಸೀಪುರದ ರಾಜಪ್ಪ ಮಾತನಾಡಿ, ‘ಸರ್ವರ ಏಳಿಗೆಗಾಗಿ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ್ದು, ಸಂವಿಧಾನದ ಆಶಯಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವದ ಹಿತವನ್ನು ಪ್ರತಿಯೊಬ್ಬರು ಕಾಪಾಡಬೇಕು. ಸರ್ವ ಧರ್ಮದವರು ಒಂದೇ ಎಂಬ ಭಾವನೆ ಮೂಡಬೇಕು. ವಿಶ್ವಕ್ಕೆ ಭಾರತ ಸಂವಿಧಾನ ಮಾದರಿಯಾಗಿದೆ. ಸಂವಿಧಾನದ ಬಗ್ಗೆ ತಿಳಿದುಕೊಳ್ಳಲು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಇದರ ಮಹತ್ವ ಅರಿಯಬೇಕಿದೆ’ ಎಂದರು.

ಅತಿಥಿಯಾಗಿದ್ದ ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕ ವಜ್ರಮುನಿ ಅವರು ‘ಸಂವಿಧಾನ ರಚನೆಯ ಹಿನ್ನೆಲೆ ಮತ್ತು ಇತಿಹಾಸ’ದ ಬಗ್ಗೆ ಮಾತನಾಡಿ, ‘ಸಂವಿಧಾನ ರಚನೆಯ ಪ್ರಕ್ರಿಯೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯ ವಾಚನ, ಬರವಣಿಗೆ ಹಾಗೂ ವಿವರಣೆಯ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ಮುರಳೀಧರ್, ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.