ಮಳವಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವು ಸೂಕ್ತ ಪಾಲನೆಯೊಂದಿಗೆ ಸಮರ್ಪಕ ಆಚರಣೆಯಾದರೆ ಸಮಸಮಾಜ ನಿರ್ಮಾಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ ಅಭಿಪ್ರಾಯಪಟ್ಟರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ, ತಾಲ್ಲೂಕು ಕಾನೂನುಗಳ ಸೇವಾ ಪ್ರಾಧಿಕಾರ ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಯೋಜಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ಪ್ರತಿಬಂಧ) ಹಾಗೂ ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯ ಕುರಿತ ವಿಚಾರಗೋಷ್ಠಿ ಮತ್ತು ಕಾರ್ಯಾಗಾರಯನ್ನು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಆಯಾಯ ವೃತ್ತಿಯಾಧಾರಿತವಾಗಿ ಧರ್ಮ, ಜಾತಿ ವ್ಯವಸ್ಥೆಯನ್ನು ಸೃಷ್ಟಿಸಿಕೊಂಡಿರುವವರು ನಾವೇ, ಇಂಥ ಜಾತಿಯಲ್ಲಿಯೇ ಹುಟ್ಟಬೇಕು ಎನ್ನುವುದನ್ನು ಯಾರೂ ಕೇಳಿಕೊಂಡು ಬಂದಿಲ್ಲ, ಮೊದಲು ನಾವೆಲ್ಲರೂ ಮನುಷ್ಯ ಜಾತಿಯವರು. ಮಾನಸಿಕ ಕಿರುಕುಳ, ಬಹಿಷ್ಕಾರದಂತಹ ಅನೇಕ ಕೃತ್ಯಗಳಿಗೆ ಕಡಿವಾಣ ಹಾಕಬೇಕಾಗಿರುವುದರಿಂದ ಇಂಥ ಗೋಷ್ಠಿಗಳು ಒಂದು ದಿನಕ್ಕೆ ಸೀಮತವಾಗಿರಬಾರದು. ಬದಲಾಗಿ ಎಲ್ಲರ ಮನದಲ್ಲಿರಬೇಕು’ ಎಂದು ಕರೆ ನೀಡಿದರು.

‘ಒಬ್ಬರ ಬದುಕನ್ನು ಇನ್ನೊಬ್ಬರು ಕಿತ್ತುಕೊಳ್ಳಬಾರದು ಎನ್ನುವ ಉದ್ದೇಶಕ್ಕೆ ಕಾನೂನಿನಲ್ಲಿ ಹಕ್ಕು ಮತ್ತು ಕರ್ತವ್ಯಗಳನ್ನು ಒಂದೇ ನಾಣ್ಯದ ಎರಡು ಮುಖಗಳಾಗಿ ಇಡಲಾಗಿದೆ. ಎಲ್ಲವೂ ನನಗೆ ಬೇಕು ಎಂಬ ಧೋರಣೆಯನ್ನು ಬಿಡಬೇಕು. ಇಂಥ ವ್ಯವಸ್ಥೆ ನಿಂತಿದಾಗ ಮಾತ್ರ ಸಮಸಮಾಜ ನಿರ್ಮಾಣವಾಗಲಿದೆ’ ಎಂದು ಹೇಳಿದರು.

ವೆಂಕಟೇಶ್ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರ ಜೊತೆಗೂಡಿ ಕೆಲಸ ಮಾಡಬೇಕಿದೆ’ ಎಂದರು.

‘ಆಧುನಿಕ ಕಾಲಘಟ್ಟದಲ್ಲಿ ಅಸ್ಪಶ್ಯತೆಯ ಸ್ವರೂಪಗಳು’ ವಿಷಯ ಕುರಿತು ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಎಚ್.ಕೆ.ಕಲಾವತಿ, ‘ದೌರ್ಜನ್ಯ ಪ್ರತಿಬಂಧ ಕಾಯ್ದೆ ಬಗ್ಗೆ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ’ ಕುರಿತು ಮೈಸೂರಿನ ವಕೀಲ ಎನ್.ಪುನೀತ್ ವಿಚಾರಗೋಷ್ಠಿ ನಡೆಸಿದರು.

ತಹಶೀಲ್ದಾರ್ ಎಸ್.ವಿ.ಲೋಕೇಶ್, ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಇ. ನಂಜಮಣಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಗ್ರಾಮೀಣ ಕುಡಿಯುವ ನೀರು ನೈರ್ಲಮ್ಯ ಇಲಾಖೆಯ ಎಂಜಿನಿಯರ್ ರಂಗಸ್ವಾಮಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಸಿ.ಮಾಧು, ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.