ಮಳವಳ್ಳಿ (ಮಂಡ್ಯ): ಇಲ್ಲಿನ ಉದ್ಯಮಿಯೊಬ್ಬರು ಕಳುಹಿಸಿದ್ದ ಊಟ ಸೇವಿಸಿ ಅಸ್ವಸ್ಥಗೊಂಡಿರುವ ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ 30 ಮಕ್ಕಳ ಪೈಕಿ 6ನೇ ತರಗತಿ ವಿದ್ಯಾರ್ಥಿ, ಮೇಘಾಲಯದ ಕಿರ್ಶನ್ ಲ್ಯಾಂಗ್ (13) ಭಾನುವಾರ ಮೃತಪಟ್ಟು, ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ.

ಉದ್ಯಮಿಯು ಶುಕ್ರವಾರ ಬೆಳಿಗ್ಗೆ ಹೋಳಿ ಹಬ್ಬ ಆಚರಿಸಿ, ಊಟದ ವ್ಯವಸ್ಥೆ ಮಾಡಿದ್ದರು. ಉಳಿದ ಊಟವನ್ನು ಸಂಜೆ ಗೋಕುಲ ವಿದ್ಯಾಸಂಸ್ಥೆಯಲ್ಲಿದ್ದ ಮಕ್ಕಳಿಗೆ ಕಳುಹಿಸಿದ್ದರು. ಆ ವಸತಿ ಶಿಕ್ಷಣ ಸಂಸ್ಥೆಯಾದ ಅಲ್ಲಿ ಮೇಘಾಲಯ ಹಾಗೂ ನೇಪಾಳ ಮೂಲದ 24 ಮತ್ತು 6 ಸ್ಥಳೀಯ ಮಕ್ಕಳು ಕಲಿಯುತ್ತಿದ್ದಾರೆ. ಊಟ ಸೇವಿಸಿದ್ದ ಮಕ್ಕಳು ಶನಿವಾರ ಬೆಳಿಗ್ಗೆ ಅಸ್ವಸ್ಥಗೊಂಡಿದ್ದರು. ಅವರಿಗೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಭಾನುವಾರ ಬೆಳಿಗ್ಗೆ ಮಕ್ಕಳಲ್ಲಿ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿಎಚ್ಒ ಡಾ.ಮೋಹನ್, ಮಾಜಿ ಶಾಸಕ ಕೆ.ಅನ್ನದಾನಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು.

ಕಠಿಣ ಕ್ರಮಕ್ಕೆ ಸಿಎಂ ಸೂಚನೆ:

‘ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಡಿ.ಸಿ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ ಮಾಡಿದ್ದಾರೆ.

‘ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರ ಸೇವಿಸುವ ಮುನ್ನ ಅದರಲ್ಲೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗ್ರತೆ ವಹಿಸಬೇಕು. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ’ ಎಂದು ಹೇಳಿದ್ದಾರೆ.

ಎಚ್ಡಿಕೆ ಸೂಚನೆ:

‘ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಇದರಿಂದ ನನಗೆ ಬಹಳ ನೋವುಂಟಾಗಿದೆ. ಇಂಥ ಘಟನೆಗಳು ಮರುಕಳಿಸದಿರಲಿ’ ಎಂದು ಮಂಡ್ಯದ ಸಂಸದರೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ‘ಎಕ್ಸ್’ ಮಾಡಿದ್ದಾರೆ.

‘ಘಟನೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕೆಂದು ಸೂಚಿಸಿದ್ದೇನೆ. ಬೇಸಿಗೆ ಕಾಲವಾದ್ದರಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರ, ಕುಡಿಯುವ ನೀರಿನ ಬಗ್ಗೆ ಇನ್ನೂ ಹೆಚ್ಚಿನ ಕಟ್ಟೆಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಉದ್ಯಮಿಯ 40 ಸಂಬಂಧಿಕರೂ ಅಸ್ವಸ್ಥ

ಹೋಳಿ ಹಬ್ಬದ ಸಂದರ್ಭದಲ್ಲಿ ಊಟ ಸೇವಿಸಿದ್ದ ಉದ್ಯಮಿ ಪುಷ್ಪೇಂದ್ರಕುಮಾರ್ ಅವರ ಸಂಬಂಧಿಕರು ಸೇರಿದಂತೆ 40ಕ್ಕೂ ಅಧಿಕ ಮಂದಿ ಸಹ ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆ ಮತ್ತು ಕೆ.ಎಂ.ದೊಡ್ಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೂವರ ಬಂಧನ

ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ. ಉಮಾ ನೀಡಿದ ದೂರಿನ ಮೇರೆಗೆ ಹೋಟೆಲ್ ಮಾಲೀಕ ಸಿದ್ದರಾಜು, ಉದ್ಯಮಿ ಪುಷ್ಪೇಂದ್ರಕುಮಾರ್, ಗೋಕುಲ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಂಕೇಶ್, ವಿದ್ಯಾಸಂಸ್ಥೆ ಅಧ್ಯಕ್ಷ ಜಗದೀಶ್, ನೌಕರ ಅಭಿಷೇಕ್ ಹಾಗೂ ಮದನ್ ಸಮುದಾಯ ಭವನದ ಕೃಷ್ಣ ಸೇರಿದಂತೆ ಆರು ಮಂದಿ ವಿರುದ್ಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಲ್ಲಿ ಸಿದ್ದರಾಜು, ಲಂಕೇಶ್, ಅಭಿಷೇಕ್ ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.