ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಹಕಾರ: ಆಶಯ್ ಮಧುಮಾದೇಗೌಡ

Published 9 ಸೆಪ್ಟೆಂಬರ್ 2023, 13:26 IST
Last Updated 9 ಸೆಪ್ಟೆಂಬರ್ 2023, 13:26 IST
ಅಕ್ಷರ ಗಾತ್ರ

ಭಾರತೀನಗರ: ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಭಾರತೀ ವಿದ್ಯಾಸಂಸ್ಥೆ ಕೈಜೋಡಿಸಲಿದೆ’ ಎಂದು ಭಾರತೀ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧುಮಾದೇಗೌಡ ಅವರು ತಿಳಿಸಿದರು.

ಇಲ್ಲಿನ ಬಿದರಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರ ವಿತರಿಸಿದ ನಂತರ ಅವರು ಮಾತನಾಡಿದರು.

‘ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಗುಣಮಟ್ಟದ ಶಿಕ್ಷಣ ನೀಡಬೇಕು. ಈಗಾಗಲೇ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಅಡಿಯಲ್ಲಿ ಹಲವು ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸುತ್ತ-ಮುತ್ತಲಿನ ಶಾಲೆಗಳಿಗೆ ಪಿಠೋಪಕರಣ ಸೇರಿದಂತೆ ಹಲವಾರು ಪರಿಕರಗಳನ್ನು ವಿತರಿಸಲಾಗಿದೆ’ ಎಂದು ವಿವರಿಸಿದರು.

‘ಮಾಜಿ ಸಂಸದ ಜಿ.ಮಾದೇಗೌಡ ಅವರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಕುಗ್ರಾಮವಾದ ಕಾಳಮುದ್ದನದೊಡ್ಡಿಯಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ಮಂದಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅವರ ಆಶಯದಂತೆ ಮುನ್ನಡೆಯುತ್ತಿದ್ದೇವೆ’ ಎಂದರು.

‘ಜಿಲ್ಲೆಯ ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದು ನಮಗೂ ನೋವು ತಂದಿದೆ. ಈಗಾಗಲೇ ವಿಧಾನ ಪರಿಷತ್ ಸದಸ್ಯ ಮಧುಮಾದೇಗೌಡ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದೊಟ್ಟಿಗೆ ಚರ್ಚೆ ನಡೆಸಿ ನೀರು ನಿಲುಗಡೆಗೆ ಕ್ರಮವಹಿಸಲಿದ್ದಾರೆ’ ಎಂದು ಹೇಳಿದರು.

ತಾ.ಪಂ ಮಾಜಿ ಸದಸ್ಯ ಗಿರೀಶ್, ಅಣ್ಣೂರು ಸೊಸೈಟಿ ನಿರ್ದೇಶಕ ಆರ್.ಸಿದ್ದಪ್ಪ, ಮುಖ್ಯಶಿಕ್ಷಕರಾದ ಮಹದೇವಯ್ಯ, ಕಾಳಪ್ಪ, ಬಸವರಾಜು, ನಾಗರತ್ನ, ಮುಖಂಡರಾದ ಪ್ರಮೋದ್, ಕಿರಣ್, ನಾಡಗೌಡ ಹನುಮಂತು, ಪ್ರಸನ್ನ, ನಿಖಿಲ್, ಎಸ್ ಡಿ ಎಂ ಸಿ ಸದಸ್ಯ ರವಿ, ಮಾದೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT