ಭಾನುವಾರ, ಆಗಸ್ಟ್ 1, 2021
27 °C

ಕೋವಿಡ್‌ ಪೀಡಿತರ ಸಂಖ್ಯೆ 357ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಹೊಸದಾಗಿ ಗುರುವಾರ 7 ಮಂದಿಯಲ್ಲಿ ಕೋವಿಡ್‌– 19 ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 357ಕ್ಕೆ ಏರಿಕೆಯಾಗಿದೆ.

ಗುರುವಾರ ಪತ್ತೆಯಾದ ಎಲ್ಲರೂ ಮುಂಬೈ ವಲಸಿಗರಾಗಿದ್ದು ಕೆ.ಆರ್‌.ಪೇಟೆ ತಾಲ್ಲೂಕಿಗೆ ಸೇರಿದ್ದಾರೆ. ಜೂನ್‌ ಮೊದಲ ವಾರದಲ್ಲಿ ಮುಂಬೈನಿಂದ ಬಂದ ಇವರನ್ನು  ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ಗಂಟಲು ದ್ರವ ಪರೀಕ್ಷೆಯಲ್ಲಿ ಇವರಿಗೆ ಕೋವಿಡ್‌–19 ದೃಢಪಟ್ಟಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರಲ್ಲಿ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ, ಆರೋಗ್ಯವಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈಗಲೂ ಮುಂಬೈನಿಂದ ವಲಸಿಗರು ಬರುತ್ತಿದ್ದು ಅವರನ್ನು ಚೆಕ್‌ಪೋಸ್ಟ್‌ಗಳಲ್ಲಿ ತಡೆದು ಕ್ವಾರಂಟೈನ್‌ ಮಾಡಲಾಗುತ್ತಿದೆ. ಇನ್ನೂ 582 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬರಬೇಕಾಗಿದೆ. 312 ಮಂದಿಯನ್ನು ವಿವಿಧ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ.

15 ಮಂದಿ ಬಿಡುಗಡೆ: ಕೋವಿಡ್‌ನಿಂದ ಗುಣಮುಖರಾದ 15 ಮಂದಿಯನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಒಟ್ಟು 357 ರೋಗಿಗಳಲ್ಲಿ 303 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 53 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.