ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಒಂದೇ ದಿನ ಇಬ್ಬರ ಸಾವು

ಒಂದೇ ದಿನ 22 ಮಂದಿಗೆ ಸೋಂಕು, 820ಕ್ಕೆ ಏರಿಕೆಯಾದ ಒಟ್ಟು ಸಂಖ್ಯೆ
Last Updated 17 ಜುಲೈ 2020, 16:53 IST
ಅಕ್ಷರ ಗಾತ್ರ

ಮಂಡ್ಯ: ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೋವಿಡ್‌–19 ರೋಗಿಗಳು ಶುಕ್ರವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಾವುಗಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ 28,896ನೇ ರೋಗಿ ಜುಲೈ 7ರಂದು ನಗರದ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 9ರಂದು ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಎಂಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಅಧಿಕ ರಕ್ತದೊತ್ತಡ, ಮಧುಮೇಹ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮದ್ದೂರು ತಾಲ್ಲೂಕಿನ 35,153ನೇ ರೋಗಿ ಜುಲೈ7ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 11ರಂದು ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಥೈರಾಯಿಡ್‌, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ಮೃತಪಟ್ಟಿದ್ಧಾರೆ.

22 ಮಂದಿಗೆ ಸೋಂಕು: ಶುಕ್ರವಾರ ಹೊಸದಾಗಿ 22 ಮಂದಿಯಲ್ಲಿ ಕೋವಿಡ್‌–19 ಪತ್ತೆಯಾಗಿದೆ. ಜಿಲ್ಲೆಯ ಒಟ್ಟು ಸಂಖ್ಯೆ 820ಕ್ಕೆ ಏರಿಕೆಯಾಗಿದೆ. ಶುಕ್ರವಾರ ಯಾವುದೇ ರೋಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಇಲ್ಲಿಯರೆಗೂ 579 ಮಂದಿ ಗುಣಮುಖರಾಗಿದ್ದಾರೆ. 237 ಪ್ರಕರಣಗಳು ಸಕ್ರಿಯವಾಗಿವೆ.

***********

ಎಚ್ಚರದಿಂದ ಇರಿ: ಡಿ.ಸಿ
‘ಜಿಲ್ಲೆಯಲ್ಲಿ ನೂರಾರು ಕೋವಿಡ್‌ ಪ್ರಕರಣ ವರದಿಯಾಗಿದ್ದು, ಶುಕ್ರವಾರ ಎರಡು ಸಾವು ಸಂಭವಿಸಿದೆ. ಎಲ್ಲರೂ ಜಾಗರೂಕತೆಯಿಂದ ಇರಬೇಕು, ಸುರಕ್ಷತಾ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

‘ಎಲ್ಲರೂ ತಪ್ಪದೇ ಮುಖಗವಸು ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸರ್‌ ಕಡ್ಡಾಯವಾಗಿ ಉಪಯೋಗಿಸಬೇಕು. ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು. 6 ರಿಂದ 8 ವಾರಗಳ ಕಾಲ ಮನೆಯಲ್ಲೇ ಇದ್ದು ಕೊವಿಡ್ ನಿಯಂತ್ರಣ ಮಾಡಲು ಸಹಕರಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT