ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | 350ಕ್ಕೇರಿದ ಕೋವಿಡ್‌ ರೋಗಿಗಳ ಸಂಖ್ಯೆ

Last Updated 17 ಜೂನ್ 2020, 14:57 IST
ಅಕ್ಷರ ಗಾತ್ರ

ಮಂಡ್ಯ: ಬುಧವಾರ ಜಿಲ್ಲೆಯಲ್ಲಿ ಹೊಸದಾಗಿ 7 ಮಂದಿಗೆ ಕೋವಿಡ್‌–19 ಪತ್ತೆಯಾಗಿದ್ದು ಒಟ್ಟು ರೋಗಿಗಳ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.

ಎಲ್ಲರೂ ಮುಂಬೈ ವಲಸಿಗರಾಗಿದ್ದು 6 ಮಂದಿ ಕೆ.ಆರ್‌.ಪೇಟೆ ತಾಲ್ಲೂಕಿಗೆ ಸೇರಿದ್ದಾರೆ. ಒಬ್ಬ ವ್ಯಕ್ತಿ ಪಾಂಡವಪುರ ತಾಲ್ಲೂಕಿಗೆ ಸೇರಿದ್ದಾರೆ. ಇವರು ರೋಗ ಸಂಬಂಧಿ ಕಾಯಿಲೆಯಿಂದ (ಐಎಲ್‌ಐ) ಬಳಲುತ್ತಿದ್ದರು. ಜೂನ್‌ ತಿಂಗಳ ಮೊದಲ ವಾರದಲ್ಲಿ ಬಂದ ಇವರನ್ನು ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು.

ಕೋವಿಡ್‌–19ನಿಂದ ಗುಣಮುಖರಾದ 6 ಮಂದಿಯನ್ನು ಬುಧವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಟ್ಟು 288 ಕೋವಿಡ್‌ ಮುಕ್ತರಾಗಿದ್ದು ಇನ್ನು ಕೇವಲ 61 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಜಿಲ್ಲೆಯಲ್ಲಿ ಕೋವಿಡ್‌ ರೋಗಿಗಳು ಚಿಕತ್ಸೆಗೆ ಸ್ಪಂದಿಸುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಮುಕ್ತರಾಗಿದ್ದು ಈಗ ಮನೆಗೆ ತೆರಳಿದ್ದಾರೆ. ಹೀಗಾಘಿ ಜಿಲ್ಲೆಯ ಜನರು ಭಯಪಡಬೇಕಾಗಿಲ್ಲ. ಆದರೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT