ಮಂಗಳವಾರ, ಸೆಪ್ಟೆಂಬರ್ 22, 2020
24 °C
ಸಾವಿನ ಸಂಖ್ಯೆ 26ಕ್ಕೆ ಏರಿಕೆ, 1,351 ಪ್ರಕರಣಗಳು ಸಕ್ರಿಯ

ಮಂಡ್ಯ | ಇಬ್ಬರ ಸಾವು: 142 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ನಾಗಮಂಗಲ ತಾಲ್ಲೂಕಿನ 1,86,686ನೇ ರೋಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಪಾಂಡವಪುರ ತಾಲ್ಲೂಕಿನ 1,30,050ನೇ ರೋಗಿ ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಕೋವಿಡ್‌ನಿಂದ ಮೃತಪಟ್ಟ ಇಬ್ಬರನ್ನೂ ಮಂಗಳವಾರ ಕೋವಿಡ್‌ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.

142 ಮಂದಿಗೆ ಸೋಂಕು: ಮಂಗಳವಾರ ಒಂದೇ ದಿನ 142 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,766ಕ್ಕೆ ಏರಿಕೆಯಾಗಿದೆ.

ಮಂಡ್ಯ ತಾಲ್ಲೂಕಿನಲ್ಲಿ 50 ಮಂದಿ, ಮದ್ದೂರು 22, ಶ್ರೀರಂಗಪಟ್ಟಣ 22, ನಾಗಮಂಗಲ 14, ಮಳವಳ್ಳಿ 9, ಪಾಂಡವಪುರ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆ ಸೇರಿ ಆಯಾ ತಾಲ್ಲೂಕು ವ್ಯಾಪ್ತಿಯ ಕೋವಿಡ್‌ ಕೇರ್‌ ಕೇಂದ್ರಗಳಿಗೆ ದಾಖಲು ಮಾಡಲಾಗಿದೆ.

ಕೋವಿಡ್‌ನಿಂದ ಗುಣಮುಖರಾದ 37 ಮಂದಿಯನ್ನು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮದ್ದೂರು ತಾಲ್ಲೂಕಿನ 8 ಮಂದಿ, ನಾಗಮಂಗಲ 12 ಕೆ.ಆರ್‌.ಪೇಟೆ 13, ಮಂಡ್ಯ 1, ಮಳವಳ್ಳಿಯ ಒಬ್ಬರನ್ನು ಬಿಡುಗಡೆ ಮಾಡಲಾಯಿತು. ಒಟ್ಟು ರೋಗಿಗಳಲ್ಲಿ 1,388 ಮಂದಿ ಗುಣಮುಖರಾಗಿದ್ದು 1351 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 2,766

ಸಕ್ರಿಯ ಪ್ರಕರಣ: 1,351

ಏರಿಕೆ: 142

ಗುಣಮುಖ: 1,388

ಏರಿಕೆ: 37

ಸಾವು: 26

ಏರಿಕೆ: 02

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು