ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌ ಭರ್ತಿಗೆ ಕ್ಷಣಗಣನೆ: 124.29 ಅಡಿಗೆ ತಲುಪಿದ ನೀರಿನ ಮಟ್ಟ

Last Updated 27 ಅಕ್ಟೋಬರ್ 2021, 13:24 IST
ಅಕ್ಷರ ಗಾತ್ರ

ಮಂಡ್ಯ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಬುಧವಾರ ಸಂಜೆ ವೇಳೆಗೆ ಜಲಾಶಯದ ನೀರಿನ ಮಟ್ಟ 124.29 ಅಡಿಗೆ ತಲುಪಿದ್ದು ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ.

ಜಲಾಶಯ ಸಂಪೂರ್ಣ ಭರ್ತಿಯಾಗಲು ಕೇವಲ 0.51 ಅಡಿಯಷ್ಟೇ (ಗರಿಷ್ಠ ಮಟ್ಟ 124.80 ಅಡಿ) ಬಾಕಿ ಉಳಿದಿದ್ದು ಗುರುವಾರ ಬೆಳಿಗ್ಗೆ ವೇಳೆಗೆ ಭರ್ತಿಯಾಗುವ ಸಾಧ್ಯತೆ ಇದೆ. ಬುಧವಾರ ಸಂಜೆ ಜಲಾಶಯ ಸೇರುತ್ತಿದ್ದ ಒಳಹರಿವು 12,534 ಕ್ಯುಸೆಕ್‌ ಇತ್ತು, 3,658 ಕ್ಯುಸೆಕ್‌ ಹೊರಹರಿವು ಇತ್ತು. ಕಳೆದ ವರ್ಷ ಇದೇ ವೇಳೆಗೆ ಜಲಾಶಯ ಗರಿಷ್ಠ ಮಟ್ಟ ತಲುಪಿತ್ತು.

ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನೀರು ಹರಿಸುವ ಸಾಧ್ಯತೆ ಇದ್ದು ನದಿ ತೀರದ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ಈಗಾಗಲೇ ಎಚ್ಚರಿಕೆ ನಿಡಿದೆ. ಸುರಕ್ಷತೆ ದೃಷ್ಟಿಯಿಂದ ಶ್ರೀರಂಗಪಟ್ಟಣ ತಾಲ್ಲೂಕು ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT